alex Certify BIG BREAKING: ಮೈಸೂರು ದಸರಾಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮೈಸೂರು ದಸರಾಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಈ ಬಾರಿಯೂ ಸಳವಾಗಿ ದಸರಾ ಆಚರಣೆ ಮಾಡಲಾಗುತ್ತಿದ್ದು, ವಿಶ್ವ ವಿಖ್ಯಾತ ಮೈಸೂರು ದಸರಾಗೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಅಕ್ಟೋಬರ್ 7ರಂದು ಮೈಸೂರು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆಯಾಗಲಿದ್ದು, ಅರಮನೆ ಆವರಣದಲ್ಲಿ ದಸರಾ ಆಚರಣೆ ಮಾಡಬೇಕು ಎಂದು ತಿಳಿಸಿದೆ.

BIG NEWS: ‘ಗಾಂಧಿ ನಡಿಗೆ ಕೃಷ್ಣೆ ಕಡೆಗೆ’ ಅಭಿಯಾನ; ಇದು S.R. ಪಾಟೀಲ್ ಅವರ ಹೊಸ ನಾಟಕ; ಸಚಿವ ಗೋವಿಂದ ಕಾರಜೋಳ ಲೇವಡಿ

ಗೈಡ್ ಲೈನ್ ಪ್ರಮುಖ ಅಂಶಗಳು;

* ಜನರು ಮಾಸ್ಕ್, ಸ್ಯಾನಿಟೈಸರ್ ಬಳಸುವುದು ಕಡ್ಡಾಯ

* ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 100 ಜನರಿಗೆ ಅನುಮತಿ

* ವರ್ಚುವಲ್ ಮೂಲಕ ಜಂಬೂಸವಾರಿ ವೀಕ್ಷಣೆಗೆ ಅವಕಾಶ

* ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 500 ಜನರಿಗೆ ಅವಕಾಶ

* 8 ದಿನಗಳ ಕಾಲ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮ

* ಜಂಬೂಸವಾರಿ, ಪಂಜಿನ ಕವಾಯತಿಗೆ 500 ಜನರಿಗೆ ಅವಕಾಶ

* ಪೊಲೀಸ್, ಆರೋಗ್ಯ ಇಲಾಖೆ ಸೂಚನೆ ಕಡ್ಡಾಯ ಪಾಲನೆ

ಇತರ ಜಿಲ್ಲೆಗಳಲ್ಲೂ ಸರಳವಾಗಿ ದಸರಾ ಆಚರಣೆಗೆ ಅನುಮತಿ ನೀಡಲಾಗಿದ್ದು, 400ಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗಿಯಾಗುವಂತಿಲ್ಲ. ದೈಹಿಕ ಅಂತರ ಇಲ್ಲದ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...