ಬೆಂಗಳೂರು; ಕಲುಷಿತ ನೀರು ಸೇವಿಸಿ 6 ಜನರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ತಲಾ 3 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ.
ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಕಲುಷಿತ ನೀರು ಕುಡಿದು 6 ಜನರು ಮೃತಪಟ್ಟ ಘಟನೆ ದು:ಖ ತಂದಿದೆ. ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಹೀಗೆ ಮಾಡಿದ್ರೆ ದೂರವಾಗುತ್ತೆ ರೋಗ
ಮೃತ ಕುಟುಂಬಕ್ಕೆ ತಲಾ 3 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ಸಿಎಂ ತಿಳಿಸಿದರು. ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 6 ಜನರು ಮೃತಪಟ್ಟಿದ್ದು, ಜೀವ ಉಳಿಸಿಕೊಳ್ಳಲು ಜನರು ಗ್ರಾಮವನ್ನೇ ತೊರೆಯುತ್ತಿದ್ದಾರೆ.