ಮೈಸೂರು: ಬಡವರಿಗೆ 3.30 ಲಕ್ಷ ಮನೆ ವಿತರಿಸಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಬಡವರಿಗಾಗಿ 3.30 ಲಕ್ಷ ಮನೆಗಳನ್ನು ನಿರ್ಮಿಸಿ ಹಕ್ಕುಪತ್ರ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಮನೆ ನಿರ್ಮಿಸಿ ಹಕ್ಕುಪತ್ರ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿರುವುದಾಗಿ ಮಾಹಿತಿ ನೀಡಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮನೆಗಳ ನೋಂದಣಿಗೆ 1000 ರೂ. ನಿಗದಿ ಮಾಡಲಾಗುವುದು. ಇತರೆ ಸಮುದಾಯದವರಿಗೆ ಮನೆಗಳ ನೋಂದಣಿಗೆ 2000 ರೂ. ಶುಲ್ಕ ನಿಗದಿ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.