ನವದೆಹಲಿ: ರೈಲ್ವೆ ಉದ್ಯೋಗಿಗಳಿಗೆ 78 ದಿನಗಳ ವೇತನವನ್ನು ಬೋನಸ್ ಆಗಿ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.
ಕೇಂದ್ರ ಸಚಿವ ಅನುರಾಗ್ ಠಾಕೂರ್ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, RPF ಮತ್ತು RPSF ಸಿಬ್ಬಂದಿಯನ್ನು ಹೊರತುಪಡಿಸಿ ಭಾರತೀಯ ರೈಲ್ವೆ ಉದ್ಯೋಗಿಗಳಿಗೆ 78 ದಿನಗಳ ವೇತನ ನೀಡಲಾಗುವುದು ಎಂದು ಹೇಳಿದ್ದಾರೆ. ಭಾರತೀಯ ರೈಲ್ವೆಯ ಸುಮಾರು 11.58 ಲಕ್ಷ ನಾನ್ ಗೆಜೆಟೆಡ್ ಅರ್ಹ ಉದ್ಯೋಗಿಗಳಿಗೆ 78 ದಿನಗಳ ಬೋನಸ್ ನೀಡಲಾಗುವುದು ಎಂದು ಹೇಳಲಾಗಿದೆ.