ಬಸ್ಸು ಹಾಗೂ ಟ್ರಕ್ ಡಿಕ್ಕಿಯಾದ ಪರಿಣಾಮ 9 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಬಾರಬಂಕಿಯಲ್ಲಿ ನಡೆದಿದೆ. ಅಪಘಾತದಲ್ಲಿ 27 ಮಂದಿ ಗಾಯಗೊಂಡಿದ್ದಾರೆ. ದೇವಾ ಪೊಲೀಸ್ ಠಾಣೆ ಸಮೀಪದ ಕಿಸಾನ್ ಪಥ್ ಬಬುರಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಸ್ಥಳೀಯರ ಪೊಲೀಸರು ಮಾಹಿತಿ ನೀಡಿದ್ದಾರೆ. ಗಂಭೀರವಾಗಿ ಗಾಯಗೊಂಡರವನ್ನು ತುರ್ತು ಚಿಕಿತ್ಸಾ ವಿಭಾಗದಲ್ಲಿ ದಾಖಲಿಸಲಾಗಿದೆ.
ದೆಹಲಿಯಿಂದ ಉತ್ತರ ಪ್ರದೇಶದ ಬಹ್ರಿಚ್ಗೆ ಪ್ರಯಾಣಿಸುತ್ತಿದ್ದ ಬಸ್ಸು ಮರಳು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಹಾಗೂ ಗಾಯಾಳುಗಳಿಗೆ ಚಿಕಿತ್ಸೆಗೆ 50 ಸಾವಿರ ರೂಪಾಯಿ ನೀಡಲಾಗುವುದು ಎಂದು ಹೇಳಿದ್ದಾರೆ.