ಬೆಂಗಳೂರು: ಬೆಂಗಳೂರಿನಲ್ಲಿ 50 ಕಡೆಗಳಲ್ಲಿ ನಡೆದಿರುವ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ದಾಳಿಗೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜಕೀಯ ನಾಯಕರ ಆಪ್ತರು, ಉದ್ಯಮಿಗಳ ನಿವಾಸದ ಮೇಲೆ ಐಟಿ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿ, ಈ ಬಗ್ಗೆ ಮಾಹಿತಿ ಪಡೆದು ಉತ್ತರಿಸುತ್ತೇನೆ. ಐಟಿ ದಾಳಿಗೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದರು.
BIG BREAKING: ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಕಾರ್ಯದರ್ಶಿ ಮನೆ ಮೇಲೂ IT ದಾಳಿ
ಬಿಎಸ್ ವೈ ಆಪ್ತ ಸಹಾಯಕ ಉಮೇಶ್ ಅವರ ನಿವಾಸದ ಮೇಲೂ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಬಗ್ಗೆ ಕೇಳಿದ ಪ್ರಶ್ನೆಗೆ ಈ ಕುರಿತು ನನಗೆ ಮಾಹಿತಿ ಇಲ್ಲ, ಮಾಹಿತಿ ಪಡೆದು ಮಾತನಾಡುತ್ತೇನೆ ಎಂದು ಹೇಳಿದರು.
ಸೈಡ್ ವೀಲಿಂಗ್ ಮಾಡಿ ದಾಖಲೆ ಬರೆದ ರಿಕ್ಷಾ ಚಾಲಕ
ಈ ನಡುವೆ ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಬಿ ಎಸ್ ವೈ ಆಪ್ತ ಉಮೇಶ್ ನನಗೆ ಚಿರಪರಿಚಿತ. ಆದರೆ ಯಾವ ಕಾರಣಕ್ಕೆ ಐಟಿ ದಾಳಿ ನಡೆದಿದೆ ಎಂಬುದಾಗಲಿ ಅಥವಾ ಅವರ ವ್ಯವಹಾರಗಳ ಬಗ್ಗೆಯಾಗಲಿ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.