ಶಿವಮೊಗ್ಗ: ಐಟಿ ದಾಳಿ ನಡೆಸುವ ಮೂಲಕ ನಮ್ಮ ಕುಟುಂಬವನ್ನು ಟಾರ್ಗೆಟ್ ಮಾಡಿಲ್ಲವೆಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಮ್ಮ ಕುಟುಂಬ ಯಾವುದೇ ತಪ್ಪು ಮಾಡಿಲ್ಲ. ಐಟಿ ದಾಳಿಗೂ ನಮ್ಮ ಕುಟುಂಬಕ್ಕೂ ಸಂಬಂಧವಿಲ್ಲ. ನಿಶ್ಚಿತವಾಗಿಯೂ ಯಾವುದೇ ಸಮಸ್ಯೆ ಇಲ್ಲ. ಐಟಿ ಅಧಿಕಾರಿಗಳು ಅವರ ಕರ್ತವ್ಯ ಮಾಡಿದ್ದಾರೆ. ಐಟಿ ಅಧಿಕಾರಿಗಳ ದಾಳಿಯನ್ನು ತಡೆಯಲು ನಾವು ಯಾರು ಎಂದು ಅವರು ಪ್ರಶ್ನಿಸಿದ್ದಾರೆ.
ಸಿಂದಗಿ ಮತ್ತು ಹಾನಗಲ್ ನಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ನಾನು ಮತ್ತು ವಿಜಯೇಂದ್ರ ಪ್ರಚಾರಕ್ಕೆ ಹೋಗುತ್ತೇವೆ. ಕೊನೆಯ ಎರಡು ದಿನ ಪ್ರಚಾರದಲ್ಲಿ ಭಾಗಿಯಾಗುತ್ತೇನೆ. ಬೆಲೆ ಏರಿಕೆಯಿಂದಾಗಿ ಬಿಜೆಪಿ ಸೋಲುತ್ತದೆ. ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಎರಡು ಕ್ಷೇತ್ರದಲ್ಲಿಯೂ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.