alex Certify BIG NEWS: ಸುಳ್ಳು ಸೃಷ್ಟಿ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು; ಉದಾಹರಣೆ ಮೂಲಕ ವಿವರಿಸಿದ HDK | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸುಳ್ಳು ಸೃಷ್ಟಿ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು; ಉದಾಹರಣೆ ಮೂಲಕ ವಿವರಿಸಿದ HDK

ಬೆಂಗಳೂರು: ದಿ. ನಾಯಕ ಎಂ.ಸಿ. ಮನಗೂಳಿ ಅವರಿಗೆ ಕಾಂಗ್ರೆಸ್ ನಾಯಕರು ಅಪಚಾರ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರ ಸುಳ್ಳಿಗೂ ಒಂದು ಮಿತಿ ಇರಬೇಕು ಎಂದು ಕಿಡಿಕಾರಿದ್ದಾರೆ.

ವ್ಯಕ್ತಿ ಇಲ್ಲವಾದ ಮೇಲೆ ಅವರ ಬಗ್ಗೆ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವುದು ರಾಜಕೀಯವಾಗಿ, ವೈಯಕ್ತಿಕವಾಗಿ ಅನೈತಿಕ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅಪ್ಪಟ ಸುಳ್ಳು ಹೇಳುವ ಮೂಲಕ ಎಂ.ಸಿ. ಮನಗೂಳಿ ಅವರಿಗೆ ಅಪಚಾರ ಮಾಡಿದ್ದಾರೆ. ಎಂ.ಸಿ. ಮನಗೂಳಿ ನಿಧನರಾಗುವ 15 ದಿನ ಮೊದಲು ತಮ್ಮ ಪುತ್ರ ಅಶೋಕ್ ಅವರನ್ನು ಕರೆದುಕೊಂಡು ನಮ್ಮ ಮನೆಗೆ ಬಂದಿದ್ದರು. ನನಗೆ ವಯಸ್ಸಾಗಿದೆ, ಆರೋಗ್ಯ ಸರಿಯಿಲ್ಲ, ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ, ಅಶೋಕನನ್ನು ನಿಮ್ಮ ಹಾಗೂ ಸಿದ್ದರಾಮಯ್ಯ ಮಡಿಲಿಗೆ ಹಾಕುತ್ತೇನೆ ಎಂದು ಡಿ.ಕೆ. ಶಿವಕುಮಾರ್ ಅವರಿಗೆ ಹೇಳಿದ್ದರಂತೆ. ಸುಳ್ಳುಗಳನ್ನು ಸೃಷ್ಟಿಸುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು ಎಂಬುದಕ್ಕೆ ಇದಕ್ಕಿಂತ ಅತ್ಯುತ್ತಮ ಉದಾಹರಣೆ ಬೇರೆ ಇಲ್ಲ ಎಂದು ಗುಡುಗಿದ್ದಾರೆ.

ಒಂದು ಮೊಟ್ಟೆಯಲ್ಲಿದೆ ʼಆರೋಗ್ಯʼದ ಗುಟ್ಟು

ಸತ್ಯ ಏನೆಂದರೆ ಕೋವಿಡ್ ಸೋಂಕಿತರಾಗಿದ್ದ ಮನಗೂಳಿ ಅವರನ್ನು ಬೆಂಗಳೂರಿನ ಅಪೊಲೋ ಆಸ್ಪತ್ರೆಗೆ ನಾವೇ ಸೇರಿಸಿದ್ದೆವು. 19 ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದರು. ಜನವರಿ 9ರಂದು ಮನಗೂಳಿ ಅಪೊಲೋ ಆಸ್ಪತ್ರೆಗೆ ದಾಖಲಾಗಿ ಜನವರಿ 28ರಂದು ಅಲ್ಲಿಯೇ ನಿಧನರಾದರು. ಅದಕ್ಕೂ ಮೊದಲು ಒಂದುವರೆ ತಿಂಗಳ ಕಾಲ ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಹಾಗಾದರೆ ಮನಗೂಳಿ ಅವರು ಡಿಕೆಶಿ ಮನೆಗೆ ಹೋಗಿದ್ದು ಯಾವಾಗ? ಮಕ್ಕಳನ್ನು ಮಡಿಲಿಗೆ ಹಾಕಿಕೊಳ್ಳಿ ಎಂದಿದ್ದು ಎಂದು? ಕಾಂಗ್ರೆಸ್ ನವರ ಹಸಿಸುಳ್ಳುಗಳು ಅಸಹ್ಯ ಹುಟ್ಟಿಸುವಂತಿದೆ ಎಂದು ಕಿಡಿಕಾರಿದ್ದಾರೆ.

ನಮ್ಮ ಪಕ್ಷದ ಅಭ್ಯರ್ಥಿಯಾಗಬೇಕಿದ್ದ ಅಶೋಕ್ ಮನಗೂಳಿ ಅವರನ್ನು ಹೈಜಾಕ್ ಮಾಡಿದ್ದೂ ಅಲ್ಲದೇ ಈಗ ಸುಳ್ಳುಗಳ ಸರಮಾಲೆ ಹೆಣೆಯುತ್ತಾ ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...