ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ದಸರಾ ಜಂಬೂ ಸವಾರಿಗೆ ಚಾಲನೆ ದೊರೆತಿದ್ದು, ಈ ವೇಳೆ ಅವಘಡವೊಂದು ಸಂಭವಿಸಿದೆ. ಜಂಬೂ ಸವಾರಿ ಮೆರವಣಿಗೆ ವೇಳೆ ಆನೆ ಬೆದರಿದ್ದು, ಜನರು ದಿಕ್ಕಾಪಾಲಾಗಿ ಓಡಿದ ಘಟನೆ ನಡೆದಿದೆ.
ಶ್ರೀರಂಗಪಟ್ಟಣ ದಸರಾ ಜಂಬೂ ಸವಾರಿ ವೇಳೆ ಚಾಮುಂಡೇಶ್ವರಿ ಮೂರ್ತಿ ಹೊತ್ತ ಗೋಪಾಲಸ್ವಾಮಿ ಎಂಬ ಆನೆ ಮೆರವಣಿಗೆಯಲ್ಲಿನ ಪಟಾಕಿ ಶಬ್ಧ, ವಾದ್ಯಗಳ ಸದ್ದಿಗೆ ಬೆದರಿ ಏಕಾಏಕಿ ಮೆರವಣಿಗೆಯಿಂದ ಹಿಂದಕ್ಕೆ ತಿರುಗಿದೆ. ಆನೆ ಬೆದರುತ್ತಿದ್ದಂತೆ ಜನರು ಜೀವ ಭಯದಲ್ಲಿ ದಿಕ್ಕಾಪಾಲಾಗಿ ಓಡಿದ್ದಾರೆ.
ತಕ್ಷಣ ಎಚ್ಚೆತ್ತ ಮಾವುತ ಆನೆಯನ್ನು ನಿಯಂತ್ರಿಸಿದ್ದು, ಭಾರಿ ಅನಾಹುತವೊಂದು ತಪ್ಪಿದೆ. ಆನೆ ಬೆದರಿದ ಹಿನ್ನೆಲೆಯಲ್ಲಿ ಜಂಬೂ ಸವಾರಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.