ಬೆಂಗಳೂರು: ಪೊಲೀಸ್ ಕಾನ್ಸ್ ಟೇಬಲ್, ಸಬ್ಇನ್ಸ್ ಪೆಕ್ಟರ್ ನೇಮಕಾತಿ ಅತ್ಯಂತ ಪಾರದರ್ಶಕವಾಗಿ ನಡೆಯುತ್ತಿದ್ದು, ಯಾವುದೇ ವದಂತಿಗೆ ಕಿವಿಗೊಡಬಾರದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
4000 ನಾಗರಿಕ ಪೊಲೀಸ್ ಕಾನ್ಸ್ ಟೇಬಲ್, 947 ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ ನಿಯಮಾನುಸಾರ ನಡೆಯಲಿದೆ. ದೈಹಿಕ ಸಾಮರ್ಥ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಸೇರಿ ನೇಮಕಾತಿ ನಿಯಮಗಳ ಅನುಸಾರ ನಡೆಯಲಿದೆ.
ಅಭ್ಯರ್ಥಿಗಳು ಮತ್ತು ಅವರ ಪೋಷಕರು ಯಾವುದೇ ವದಂತಿಗೆ ಕಿವಿಗೊಡಬಾರದು. ಕೆಲವರು ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸುತ್ತಿರುವ ಪ್ರಕರಣಗಳು ಕಂಡುಬಂದಿವೆ. ಇಂತಹ ಯಾವುದೇ ಆಮಿಷಗಳಿಗೆ ಕಿವಿಗೊಡಬಾರದು ಎಂದು ಗೃಹ ಸಚಿವರು ತಿಳಿಸಿದ್ದಾರೆ.