alex Certify ಬದುಕು ಕಟ್ಟಿಕೊಟ್ಟ ಪಕ್ಷದ ಬಗ್ಗೆ ‘ಸಿದ್ಧಹಸ್ತ’ರ ಫರ್ಮಾನು: ಸಿದ್ಧರಾಮಯ್ಯ ವಿರುದ್ಧ ಕುಮಾರಸ್ವಾಮಿ ಗುಡುಗು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬದುಕು ಕಟ್ಟಿಕೊಟ್ಟ ಪಕ್ಷದ ಬಗ್ಗೆ ‘ಸಿದ್ಧಹಸ್ತ’ರ ಫರ್ಮಾನು: ಸಿದ್ಧರಾಮಯ್ಯ ವಿರುದ್ಧ ಕುಮಾರಸ್ವಾಮಿ ಗುಡುಗು

ರಾಜಕೀಯ ಬದುಕು ಕಟ್ಟಿಕೊಟ್ಟ ಪಕ್ಷವನ್ನೇ ಸಿದ್ದರಾಮಯ್ಯ ನಿಂದಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ದೂರಿದ್ದಾರೆ

ಜೆಡಿಎಸ್ ಪಕ್ಷವನ್ನು ಟೀಕೆ ಮಾಡದಿದ್ದರೆ ಸಿದ್ದರಾಮಯ್ಯನವರಿಗೆ ನಿದ್ದೆ ಬರಲ್ಲ ಅಂತ ಕಾಣುತ್ತೆ. ಸಿಂದಗಿ ಕ್ಷೇತ್ರದಲ್ಲಿ ಅವರ ಪಕ್ಷ ಮೂರನೇ ಸ್ಥಾನದಲ್ಲಿತ್ತು. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಎರಡನೇ ಸ್ಥಾನಕ್ಕೆ ಬಂದ ಇತಿಹಾಸವೇ ಇಲ್ಲ. ಹಾಗೆ ನೋಡಿದರೆ ರಾಜಕೀಯ ಬದುಕು ಕಟ್ಟಿಕೊಟ್ಟ ಪಕ್ಷವನ್ನೇ ಅವರು ನಿಂದಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಎಂ.ಸಿ. ಮನಗೂಳಿ ನಿಧನದ ಅನುಕಂಪದಲ್ಲಿ ತೇಲುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ಇದ್ದ ಅವರ ಪುತ್ರನನ್ನು ಹೈಜಾಕ್ ಮಾಡಿ, ಜನರಿಗೆ ಸಿದ್ಧಕಲೆ ದರ್ಶನ ಆಗುತ್ತಿದ್ದಂತೆ ಈಗ ಅನುಕಂಪ ಗಿಟ್ಟಿಸುವ ನಾಟಕವಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಬುದ್ಧಿವಂತ ಮತದಾರರ ಜೆಡಿಎಸ್ ಪಕ್ಷಕ್ಕೆ ಮತ ಹಾಕಲ್ಲ ಎಂದು ಸಿದ್ಧಹಸ್ತರು ಫರ್ಮಾನು ಹೊರಡಿಸಿದ್ದಾರೆ. ಜನರು ಇವರ ಜೇಬಿನಲ್ಲಿ ಇದ್ದಾರಾ? ಇದು ಸಿಂದಗಿ ಜನರಿಗೆ ಅಪಮಾನ ಮಾಡುವ ಅಹಂಕಾರದ ಹೇಳಿಕೆ. ಅವರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...