ಬೆಂಗಳೂರು: ನವೆಂಬರ್ ಮೊದಲ ವಾರದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸುಳಿವು ಸಿಕ್ಕ ಬೆನ್ನಲ್ಲೇ ಸಚಿವಾಕಾಂಕ್ಷಿಗಳಲ್ಲಿ ಕುರ್ಚಿ ಕನಸು ಗರಿಗೆದರಿದ್ದು, ವರಿಷ್ಠರ ಬಳಿ ಲಾಬಿ ಆರಂಭಿಸಿದ್ದಾರೆ.
ಸಂಪುಟ ವಿಸ್ತರಣೆ ಸುಳಿವು ಸಿಗುತ್ತಿದ್ದಂತೆ ಕಳೆದ ಮೂರು ದಿನಗಳಿಂದ ದೆಹಲಿಯಲ್ಲೇ ಬೀಡು ಬಿಟ್ಟಿರುವ ಶಾಸಕ ರಮೇಶ್ ಜಾರಕಿಹೊಳಿ, ಕೊಟ್ಟ ಮಾತಿನಂತೆ ಈಬಾರಿಯ ಸಂಪುಟ ವಿಸ್ತರಣೆಯಲ್ಲಾದರೂ ತನಗೆ ಮಂತ್ರಿ ಸ್ಥಾನವನ್ನು ನೀಡಬೇಕು ಎಂದು ಹೈಕಮಾಂಡ್ ಬಳಿ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.
ಶ್ರೀಮಂತರಾಗುವುದು ಹೇಗೆ…? ಇಲ್ಲಿದೆ ಸಂಪತ್ತು ಹೊಂದುವ ಸುಲಭ ಮಾರ್ಗಗಳ ಮಾಹಿತಿ
ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಗೆ ಹೆಚ್ಚು ಮತಗಳನ್ನು ತಂದಿದ್ದೇನೆ, ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲೂ ಹೆಚ್ಚು ಮತ ತಂದಿದ್ದೇನೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗಳಲ್ಲೂ ಬಿಜೆಪಿ ಗೆಲ್ಲಿಸುತ್ತೇನೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿಯೂ ಬೆಳಗಾವಿಯ 18 ಕ್ಷೇತ್ರಗಳಲ್ಲೂ ಪಕ್ಷದ ಗೆಲುವಿಗೆ ಪ್ರಯತ್ನಿಸುತ್ತೇನೆ. ಈ ನಿಟ್ಟಿನಲ್ಲಿ ಸಚಿವ ಸ್ಥಾನವನ್ನು ನೀಡಬೇಕು ಎಂದು ವರಿಷ್ಠರಿಗೆ ಮನವಿ ಮಾಡಿದ್ದಾರೆ.
ಸಿಡಿ ಬಹಿರಂಗ ಪ್ರಕರಣದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಮೇಶ್ ಜಾರಕಿಹೊಳಿ, ಒಟ್ಟಾರೆ ಈ ಬಾರಿಯಾದರೂ ಸಚಿವ ಸ್ಥಾನವನ್ನು ಮತ್ತೆ ಗಿಟ್ಟಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಶತಾಯಗತಾಯ ಪ್ರಯತ್ನ ನಡೆಸಿದ್ದಾರೆ.