ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಆನ್ ಲೈನ್ ಗ್ಯಾಂಬ್ಲಿಂಗ್ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಆನ್ ಲೈನ್ ಜೂಜುಕೋರರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ.
ಆನ್ ಲೈನ್ ಗ್ಯಾಂಬ್ಲಿಂಗ್, ಗೇಮ್ ಬ್ಯಾನ್ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಇತ್ತೀಚೆಗೆ ಅಧಿವೇಶನದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದರು. ಇದರ ಬೆನ್ನಲ್ಲೇ ಇಂದಿನಿಂದಲೇ ರಾಜ್ಯದಲ್ಲಿ ಆನ್ ಲೈನ್ ಜೂಜು, ಗೇಮ್ ಗಳನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಪೇ ಟೀಂ ಫಸ್ಟ್, ಗೇಮ್ ಜಿ, ಡ್ರೀಮ್ 11 ಆಪ್ ಸೇರಿದಂತೆ ಹಲವು ಫ್ಯಾಂಟಸಿ ಗೇಮ್ ಗಳನ್ನು ಕೂಡ ಸ್ಥಗಿತಗೊಳಿಸಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತಂದ ಬೆನ್ನಲ್ಲೇ ಇದೀಗ ಆನ್ ಲೈನ್ ಗೇಮ್, ಆನ್ ಲೈನ್ ಜೂಜು, ಬೆಟ್ಟಿಂಗ್ ಗಳನ್ನು ನಿಷೇಧಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ.