ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಪ್ರಮುಖ ಅಸ್ತ್ರವನ್ನಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗಿದೆ.
ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಿದರೆ ವಿರೋಧಿಸಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಈ ಪ್ರಕರಣದ ತನಿಖೆಯ ಬಗ್ಗೆ ಪ್ರಶ್ನಿಸಲು ಮತ್ತು ಪ್ರಮುಖ ಅಸ್ತ್ರವನ್ನಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಪ್ಲಾನ್ ಮಾಡಿಕೊಂಡಿದ್ದು, ಬೈ ಎಲೆಕ್ಷನ್ ಬಳಿಕ ಈ ವಿಚಾರ ಕೈಗೆತ್ತಿಕೊಳ್ಳಲಾಗುತ್ತದೆ.
ಸಿಡಿ ಪ್ರಕರಣದಲ್ಲಿ ಬಿ ರಿಪೋರ್ಟ್ ಹಾಕಲು ಮುಂದಾಗಿದ್ದಾರೆ ಎನ್ನುವ ಮಾಹಿತಿ ಿದ್ದು, ಇದನ್ನು ಪ್ರಶ್ನಿಸಿ ಕಾನೂನಾತ್ಮಕ, ರಾಜಕೀಯ ಹೋರಾಟ ಮಾಡುವುದಕ್ಕೆ ಕಾಂಗ್ರೆಸ್ ಪ್ಲಾನ್ ಮಾಡಿಕೊಂಡಿದ್ದು, ತನಿಖೆ ನಡೆಸುತ್ತಿರುವ ಪೊಲೀಸರ ವೈಖರಿ ಮತ್ತು ತನಿಖಾ ವಿಧಾನ ಪ್ರಶ್ನೆ ಮಾಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ.
ಕೆಪಿಸಿಸಿ ಕಾನೂನು ಘಟಕ ಮತ್ತು ಮಾಧ್ಯಮ ವಿಭಾಗಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ಸಂಬಂಧ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ವಿಚಾರ ಕೈಬಿಡದಂತೆ ಸೂಚನೆ ನೀಡಿದ್ದಾರೆ. ಅಗತ್ಯವಾದರೆ ಮುಂದಿನ ದಿನಗಳಲ್ಲಿ ಸೂಕ್ತ ಹೋರಾಟ ರೂಪಿಸುವಂತೆ ಡಿ,ಕೆ, ಶಿವಕುಮಾರ್ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.