ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದೆ. ಬೆಂಗಳೂರು ಏರ್ಪೋರ್ಟ್ ಗೆ ಜಲದಿಗ್ಬಂಧನ ಉಂಟಾಗಿ ರನ್ ವೇ, ಟರ್ಮಿನಲ್, ಸಂಪರ್ಕ ರಸ್ತೆಗಳು ಜಲಾವೃತಗೊಂಡು ಸವಾರರು ಪರದಾಟ ನಡೆಸುವಂತಾಗಿದೆ.
ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆಯಾಗಿದ್ದು, ಬೆಂಗಳೂರು ಏರ್ಪೋರ್ಟ್ ಮುಖ್ಯರಸ್ತೆಗಳು ಜಲಾವೃತಗೊಂಡ ಪರಿಣಾಮ ಪ್ರಯಾಣಿಕರು ಏರ್ ಪೋರ್ಟ್ ತಲುಪಲು ಸಾಧ್ಯವಾಗದೇ ಟ್ರ್ಯಾಕ್ಟರ್ ಗಳಲ್ಲಿ ನಿಲ್ದಾಣಕ್ಕೆ ತೆರಳಿದ್ದಾರೆ. ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿ ಜನ ತೊಂದರೆ ಅನುಭವಿಸಿದ್ದಾರೆ.
ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು ಪ್ರಯಾಣಿಕರು ಟ್ರ್ಯಾಕ್ಟರ್ ನಲ್ಲಿ ಏರ್ಪೋರ್ಟ್ ತಲುಪಿದ್ದಾರೆ. ಬೆಂಗಳೂರಿನ ಬಹುತೇಕ ರಸ್ತೆಗಳು, ಅಂಡರ್ ಪಾಸ್ ಗಳಲ್ಲಿ ನೀರು ತುಂಬಿಕೊಂಡಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ರಸ್ತೆಯಲ್ಲಿ ಭಾರಿ ಪ್ರಮಾಣದ ನೀರು ಹರಿದ ಪರಿಣಾಮ ವಾಹನ ಸವಾರರಿ ಪರದಾಟ ನಡೆಸಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗಿ ನೀರು ನಿಂತಿತ್ತು.