ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಮತ್ತು ಇತರೆ ರಸ್ತೆಗಳಲ್ಲಿರುವ ಅವೈಜ್ಞಾನಿಕ ಹಂಪ್ ಗಳನ್ನು ತೆರವುಗೊಳಿಸುವಂತೆ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಸೂಚನೆ ನೀಡಿದ್ದಾರೆ.
ವಿಕಾಸಸೌಧದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹದಗೆಟ್ಟಿರುವ ಭಾಗವನ್ನು ಕಾಲಮಿತಿಯೊಳಗೆ ದುರಸ್ತಿ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಮತ್ತು ಇತರೆ ರಸ್ತೆಗಳಲ್ಲಿ ಅವೈಜ್ಞಾನಿಕ ಹಂಪ್ ಗಳಿಂದ ಅಪಘಾತಗಳ ಸಂಖ್ಯೆ ಕಡಿಮೆಯಾಗುವ ಬದಲು ಹೆಚ್ಚಾಗಿದೆ. ಇಂತಹ ಅವೈಜ್ಞಾನಿಕ ಹಂಪ್ ಗಳನ್ನು ತೆರವುಗೊಳಿಸಬೇಕು. ಮಂದಗತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳಿಗೆ ವೇಗ ನೀಡಬೇಕು ಎಂದು ತಿಳಿಸಿದ್ದಾರೆ.