ದೇಶದಲ್ಲಿ ಕಲ್ಲಿದ್ದಲು ಕೊರತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬೇಜವಾಬ್ದಾರಿಯೇ ಕಾರಣ ಎಂದು ಟ್ವಿಟರ್ನಲ್ಲಿ ಟೀಕಿಸಿದ್ದ ಕಾಂಗ್ರೆಸ್ಗೆ ಬಿಜೆಪಿ ಟ್ವಿಟರ್ ಮೂಲಕವೇ ಟಾಂಗ್ ನೀಡಿದೆ.
2016ರ ಮಾರ್ಚ್ 18ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡುತ್ತಿದ್ದ ವೇಳೆ ಸದನದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಆಗ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಜೆಟ್ ಪ್ರತಿಯನ್ನು ಸಿದ್ದರಾಮಯ್ಯ ಮಂಡಿಸಿದ್ದರು. ಈ ಫೋಟೋವನ್ನು ಬಿಜೆಪಿ ಟ್ವಿಟರ್ನಲ್ಲಿ ಶೇರ್ ಮಾಡಿದೆ.
ಖಾಸಗಿ ಆಸ್ಪತ್ರೆಯ ಲಸಿಕೆ ಡೇಟಾ ತನ್ನ ಬಳಿ ಇಲ್ಲವೆಂದ ಕೇಂದ್ರ ಸರ್ಕಾರ
‘ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕರ್ನಾಟಕವನ್ನು ಕತ್ತಲೆಯತ್ತ ತಳ್ಳಿದ ಮಹಾನುಭಾವ’ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ರಾಜ್ಯ ಹಾಗೂ ದೇಶದಲ್ಲಿ ಉಂಟಾಗಿರುವ ಕಲ್ಲಿದ್ದಲು ಅಭಾವದ ವಿಚಾರದಲ್ಲಿ ಟ್ವೀಟ್ ಮಾಡಿದ್ದ ಕಾಂಗ್ರೆಸ್, ರಾಜ್ಯದಲ್ಲಿ ಸೃಷ್ಟಿಯಾಗಿರುವ ಕಲ್ಲಿದ್ದಲು ಹಾಗೂ ವಿದ್ಯುತ್ ಬಿಕ್ಕಟ್ಟಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಬೇಜವಾಬ್ದಾರಿಯೇ ಕಾರಣ. ಕಲ್ಲಿದ್ದಲು ಕೊರತೆ ತೀವ್ರಗೊಳ್ಳುವವರೆಗೂ ಕಣ್ಮುಚ್ಚಿ ಕುಳಿತಿದ್ದೇಕೆ..? ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಹೊಂದಾಣಿಕೆ ಇಲ್ಲವೇ..? ಬಿಕ್ಕಟ್ಟು ಎದುರಿಸಲು ಸರ್ಕಾರದ ಕಾರ್ಯಸೂಚಿ ಏನು ಎಂದು ಪ್ರಶ್ನೆ ಮಾಡಿತ್ತು.