ನವದೆಹಲಿ: ದಸರಾ ಹಬ್ಬದ ಸಂದರ್ಭದಲ್ಲಿ ಕೇಂದ್ರ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ ನೀಡಲಾಗಿದೆ. ಹಿಂಗಾರು ಬಿತ್ತನೆಯ ಸಂದರ್ಭದಲ್ಲಿ ರೈತರಿಗೆ ಅನುಕೂಲವಾಗುವಂತೆ ಪಿ ಅಂಡ್ ಕೆ ರಸಗೊಬ್ಬರಗಳಿಗೆ 28,655 ಕೋಟಿ ರೂಪಾಯಿಗಳ ಸಬ್ಸಿಡಿ ನೀಡಲಾಗಿದೆ
ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ರಸಗೊಬ್ಬರಗಳಿಗೆ 28,655 ಕೋಟಿ ರೂಪಾಯಿ ನಿವ್ವಳ ಸಬ್ಸಿಡಿ ನೀಡುವ ಪ್ರಸ್ತಾವನೆಯನ್ನು ಅಂಗೀಕರಿಸಲಾಗಿದೆ. ಈ ಅಕ್ಟೋಬರ್ನಿಂದ ಮುಂದಿನ ವರ್ಷದ ಮಾರ್ಚ್ ವರೆಗೆ ಅನ್ವಯವಾಗುವಂತೆ ರಸಗೊಬ್ಬರಗಳಿಗೆ ಪೌಷ್ಟಿಕಾಂಶ ಆಧಾರಿತ ಪ್ರಕಾರದ ಸಬ್ಸಿಡಿ ದರಗಳ ಪ್ರಸ್ತಾವನೆಯನ್ನು ಅಂಗೀಕರಿಸಲಾಗಿದೆ. ಇದರಿಂದ ಹಿಂಗಾರು ಬಿತ್ತನೆಗೆ ಪಿ ಅಂಡ್ ಕೆ. ರಸಗೊಬ್ಬರ ಖರೀದಿಸುವ ರೈತರಿಗೆ ಅನುಕೂಲವಾಗಲಿದೆ ಎನ್ನಲಾಗಿದೆ.