ತುಮಕೂರು: ಕೋವಿಡ್ ಲಸಿಕೆ ಪಡೆಯದಿದ್ದರೆ ಪಡಿತರ ಸ್ಥಗಿತಗೊಳಿಸುವಂತೆ ಸಲಹೆ ನೀಡಲಾಗಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
ತುಮಕೂರಿನಲ್ಲಿ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಹಿಂದೆ ಕೊರೊನಾ ಲಸಿಕೆ ಇಲ್ಲವೆಂದು ಹೇಳುತ್ತಿದ್ದರು. ಈಗ ಲಸಿಕೆ ಇದ್ದರೂ ಕೂಡ ಪಡೆದುಕೊಳ್ಳಲು ಮುಂದೆ ಬರುತ್ತಿಲ್ಲ. ಕೊರೋನಾ ತಡೆಗಟ್ಟಲು ಎಲ್ಲರೂ ಲಸಿಕೆ ಹಾಕಿಸಿಕೊಳ್ಳುವುದು ಅನಿವಾರ್ಯವಾಗಿದೆ. ಲಸಿಕೆ ಪಡೆಯದವರಿಗೆ ಪಡಿತರ ಸ್ಥಗಿತಗೊಳಿಸುವಂತೆ ಈಗಾಗಲೇ ಸಲಹೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ತುಮಕೂರು ಜಿಲ್ಲೆಯ ಮಟ್ಟಿಗಾದರೂ ಲಸಿಕೆ ಪಡೆಯದವರಿಗೆ ಪಡಿತರ ಸ್ಥಗಿತಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಬೇಕಿದೆ. ಬುಧವಾರವೂ ಮುಂದುವರೆಯಲಿರುವ ಕೆಡಿಪಿ ಸಭೆಯಲ್ಲಿ ಜಿಲ್ಲೆಯ ಶಾಸಕರು ಭಾಗವಹಿಸಲಿದ್ದು, ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಕೊರೋನಾ ಯಾವಾಗ ಬೇಕಾದರೂ ಹೆಚ್ಚಾಗಬಹುದು ನಿಯಂತ್ರಣಕ್ಕಾಗಿ ಈಗಿನಿಂದಲೇ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.