alex Certify ನಿರಂತರ ಮಳೆಗೆ ವಾಲಿದ ಕಟ್ಟಡ, ಯಾವುದೇ ಕ್ಷಣದಲ್ಲಿ ಕುಸಿಯುವ ಆತಂಕ: ಸಚಿವ ಗೋಪಾಲಯ್ಯ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿರಂತರ ಮಳೆಗೆ ವಾಲಿದ ಕಟ್ಟಡ, ಯಾವುದೇ ಕ್ಷಣದಲ್ಲಿ ಕುಸಿಯುವ ಆತಂಕ: ಸಚಿವ ಗೋಪಾಲಯ್ಯ ಭೇಟಿ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಕುಸಿಯುವ ಆತಂಕ ಎದುರಾಗಿದೆ. ಭಾರಿ ಮಳೆಯ ಕಾರಣ ಕಮಲನಗರದಲ್ಲಿ ಮೂರು ಅಂತಸ್ತಿನ ಕಟ್ಟಡದ ಕೆಳಮಹಡಿ ಗೋಡೆ ಕುಸಿದಿದ್ದು, ವಾಲಿದ ಕಟ್ಟಡ ಯಾವುದೇ ಕ್ಷಣದಲ್ಲಿ ಉರುಳುವ ಆತಂಕ ಎದುರಾಗಿದೆ.

ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ಶಬ್ದ ಕೇಳಿ ಮನೆಯಲ್ಲಿ ವಾಸವಾಗಿದ್ದ ಕುಟುಂಬದವರು ಹೊರಗೆ ಬಂದಿದ್ದಾರೆ. ಅಕ್ಕಪಕ್ಕದ ನಿವಾಸಿಗಳಿಗೂ ಕಟ್ಟಡ ಕುಸಿತದಿಂದ ಹಾನಿಯಾಗುವ ಆತಂಕ ಎದುರಾಗಿದೆ.

ಶಿಥಿಲಗೊಂಡ ಕಟ್ಟಡದಲ್ಲಿದ್ದ ಕುಟುಂಬದವರಿಗೆ ಸಮೀಪದ ಶಾಲೆಯಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಮಾಹಿತಿ ತಿಳಿದ ಸ್ಥಳೀಯ ಶಾಸಕ ಗೋಪಾಲಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗತ್ಯ ಕ್ರಮ ಕೈಗೊಳ್ಳಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸ್ಥಳದಲ್ಲೇ ಬೀಡುಬಿಟ್ಟಿರುವ ಅಧಿಕಾರಿಗಳು ಮುಂದಿನ ಕಾರ್ಯಾಚರಣೆ ಕೈಗೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...