ಚಿತ್ರದುರ್ಗ: ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ರೈತರು ಬಳಸುವ ಡೀಸೆಲ್ ಮೇಲೆ ಪ್ರತಿ ಲೀಟರ್ ಗೆ 20 ರೂಪಾಯಿ ಸಬ್ಸಿಡಿ ನೀಡಲು ಸರ್ಕಾರ ಚಿಂತನೆ ನಡೆಸಿದೆ.
ಕೃಷಿ ಸಚಿವ ಬಿ.ಸಿ. ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಚಿತ್ರದುರ್ಗದ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಮುರುಘಾಮಠದಲ್ಲಿ ಆಯೋಜಿಸಿದ್ದ ಕೃಷಿ ಮತ್ತು ಕೈಗಾರಿಕೆ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರೈತರು ಬಳಸುವ ಡೀಸೆಲ್ ಗೆ ಸಬ್ಸಿಡಿ ನೀಡಲು ಸಮ್ಮತಿಸಿದ್ದರು. ಕೊರೊನಾ ಕಾರಣದಿಂದಾಗಿ ಅದು ಸಾಧ್ಯವಾಗಿರಲಿಲ್ಲ. ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದರ ಬಗ್ಗೆ ಸಕಾರಾತ್ಮಕ ನಿಲುವು ತೋರಿದ್ದಾರೆ. ಯೋಜನೆ ಜಾರಿಯಾದಲ್ಲಿ ರೈತರಿಗೆ ಡೀಸೆಲ್ ಗೆ ಸಬ್ಸಿಡಿ ನೀಡಿದ ಮೊದಲ ರಾಜ್ಯವೆಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಲಿದೆ ಎಂದು ತಿಳಿಸಿದ್ದಾರೆ.