ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರಿ ಮಳೆ ಮುಂದುವರಿಯಲಿದೆ. ಅಕ್ಟೋಬರ್ 16, 17 ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯ ಉಡುಪಿ, ಉತ್ತರಕನ್ನಡ, ದಕ್ಷಿಣಕನ್ನಡ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಎರಡು ದಿನ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಉಳಿದ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ ಎಂದು ಹೇಳಲಾಗಿದೆ.