alex Certify BIG NEWS: ‘ಅಹಿಂದ’ ಎಂದು ಜನರ ದಾರಿ ತಪ್ಪಿಸಿ ಸ್ವಪಕ್ಷದ ಅಲ್ಪಸಂಖ್ಯಾತ ನಾಯಕರ ಬಲಿಪಡೆಯುವ ರಾಜಕೀಯ ಟರ್ಮಿನೇಟರ್; ಸಿದ್ದು ವಿರುದ್ಧ HDK ಸರಣಿ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಅಹಿಂದ’ ಎಂದು ಜನರ ದಾರಿ ತಪ್ಪಿಸಿ ಸ್ವಪಕ್ಷದ ಅಲ್ಪಸಂಖ್ಯಾತ ನಾಯಕರ ಬಲಿಪಡೆಯುವ ರಾಜಕೀಯ ಟರ್ಮಿನೇಟರ್; ಸಿದ್ದು ವಿರುದ್ಧ HDK ಸರಣಿ ವಾಗ್ದಾಳಿ

ಬೆಂಗಳೂರು: ಅಲ್ಪಸಂಖ್ಯಾತ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು ಕೊಡುವ ಸಿದ್ದಹಸ್ತ ಶೂರನ ನಿಜಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ. ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ ಪಕ್ಷಕ್ಕಾಗಿ ದುಡಿದ ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

’ಅಹಿಂದ’ ಎಂದು ಜನರನ್ನು ಅಡ್ಡದಾರಿ ಹಿಡಿಸಿದ ಸಿದ್ದಹಸ್ತ ಶೂರರು ತಮ್ಮ ಸ್ವಪಕ್ಷಲ್ಲೇ ಮುಸ್ಲೀಂ ನಾಯಕರನ್ನು ಒಬ್ಬೊಬ್ಬರನ್ನಾಗಿ ಟಾರ್ಗೆಟ್ ಮಾಡುತ್ತಾ ಅಲ್ಪಸಂಖ್ಯಾತರ ಅಂತ್ಯ ರಾಜಕಾರಣದ ಟರ್ಮಿನೇಟರ್ ಆಗಿ ಹೊರ ಹೊಮ್ಮಿದ್ದಾರೆ ಎಂದು ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಅ. 21 ರಿಂದಲೇ ರಾಜ್ಯದಲ್ಲಿ ಪ್ರಾಥಮಿಕ ಶಾಲೆ, ಅಂಗನವಾಡಿ, ಬಿಸಿಯೂಟ ಆರಂಭಿಸಲು ಆಗ್ರಹ

ನಂಬಿ ಅಧಿಕಾರ ಕೊಟ್ಟ ಪಕ್ಷದ ಕತ್ತನ್ನೇ ಕುಯ್ಯುವ, ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುವ ಸಿದ್ದಹಸ್ತ ಸೂತ್ರಧಾರಿಯ ಒಳ ರಾಜಕೀಯಕ್ಕೆ ಬಲಿಯಾಗುತ್ತಿರುವ ಅಲ್ಪಸಂಖ್ಯಾತ ನಾಯಕರ ದೊಡ್ಡಪಟ್ಟಿಯೇ ಇದೆ. ಕಾಂಗ್ರೆಸ್ ನಲ್ಲಿ ನಡೆದಿರುವ ಅಲ್ಪಸಂಖ್ಯಾತರ ರಾಜಕೀಯ ನರಮೇಧಕ್ಕೆ ಯಾರು ಕಾರಣ ಎಂದು ಜನರಿಗೆ ಗೊತ್ತಾಗಲಿ ಎಂದಿದ್ದಾರೆ.

2012ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹಮದ್ ಸರಡಗಿ ಸೋಲುತ್ತಾರೆ. ಪಕ್ಷೇತರ ಅಭ್ಯರ್ಥಿಯಾಗಿದ್ದ ಭರತಿ ಸುರೇಶ್ ತಮ್ಮ ಗೆಲುವಿಗೆ ಬೇಕಿದ್ದ 19 ಮತ ಮೀರಿ 23 ಮತ ಪಡೆದು ಗೆಲ್ಲುತ್ತಾರೆ. ಇಲ್ಲಿ ಸರಡಿಗಿ ಸೋಲಿಗೆ, ಭೈರತಿ ಗೆಲುವಿಗೆ ಕಾರಣವಾದ ಸಿದ್ದಸೂತ್ರ ಹೆಣೆದಿದ್ದು ಯಾರು? 2016ರ ಹೆಬ್ಬಾಳ ವಿಧಾನಸಭಾ ಉಪಚುನಾವಣೆಯಲ್ಲಿ ಯೂ ’ಸಿದ್ಧಕಲೆ’ಯಿಂದ ಪಕ್ಷೇತರ ಅಭ್ಯರ್ಥಿ ಭೈರತಿ ಸುರೇಶ್ ಕಣಕ್ಕಿಳಿಸಿ ಅವರನ್ನು ಗೆಲ್ಲಿಸಿ, ಕಾಂಗ್ರೆಸ್ ಹಿರಿಯ ನಾಯಕ ಸಿ.ಕೆ.ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಷರೀಫ್ ಅವರನ್ನು ಸೋಲಿಸಲಾಯಿತು. 2023ರ ಚುನಾವಣೆಯಲ್ಲಿ ಭೈರತಿ ಸುರೇಶ್ ಗೆ ಹೆಬ್ಬಾಳ ಕಾಂಗ್ರೆಸ್ ಟಿಕೆಟ್ ಗ್ಯಾರಂಟಿ. ಹಾಗಾದರೆ ಜಾಫರ್ ಷರೀಫ್ ಮೊಮ್ಮಗನ ಕಥೆಯೇನು? ಎಂದು ಪ್ರಶ್ನಿಸಿದ್ದಾರೆ.

ಸಿಹಿ ಗೆಣಸಿನಲ್ಲಿರುವ ಔಷಧೀಯ ಗುಣಗಳು ಯಾವುವು ಗೊತ್ತಾ…..?

ಕಳೆದ ಲೋಕಸಭೆ ಚುನಾವಣೆ ಬಳಿಕ ತಮಗಾಗುತ್ತಿರುವ ಅನ್ಯಾಯ ಪ್ರಶ್ನಿಸಿದ ರೋಷನ್ ಬೇಗ್ ಗೆ ಶೋಕಾಸ್ ನೋಟೀಸ್ ನೀಡಿ, ಅವರನ್ನು ಬೇಕಾ ಬಿಟ್ಟಿ ಬಳಸಿಕೊಂಡು ಅವರನ್ನೇ ಅಪಮಾನ ಮಾಡುತ್ತಾರೆ ‘ಸಿದ್ದಹಸ್ತ’ರು. ಮೈಸೂರಿನ ನಾಯಕ ತನ್ವೀರ್ ಸೇಠ್ ಅವರನ್ನೂ ಅಪಮಾನಕರವಾಗಿ ನಡೆಸಿಕೊಂಡಿದ್ದೂ ಇದೇ ’ಸಿದ್ದಹಸ್ತರು’. ಈಗ ಆಡಿಯೋ ನೆಪದಲ್ಲಿ ಸಲೀಂ ಮೊಹಮದ್ ಬಲಿ ಪಡೆದಾಗಿದೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಟ್ಟು ದೊಡ್ಡವರ ರಕ್ಷಣೆ ಮಾಡಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣವೆಂದರೆ ಇದೇನಾ ಸಿದ್ದಹಸ್ತರೇ? ಎಂದು ಪ್ರಶ್ನಿಸಿದ್ದಾರೆ.

ತೊಟ್ಟಿಲನ್ನೂ ತೂಗುತ್ತಾ, ಮಗುವನ್ನೂ ಚಿವುಟುತ್ತಾ, ಸಾಧ್ಯವಾದರೆ ಆ ಮಗುವಿನ ಕತ್ತನ್ನೂ ಕುಯ್ಯುತ್ತಾ ನಡೆಸುತ್ತಿರುವ ಇಂಥ ನೀಚ ರಾಜಕಾರಣ ಮುಸ್ಲೀಂ ಬಾಂಧವರಿಗೆ ಈಗ ಗೊತ್ತಾಗಿಬಿಟ್ಟಿದೆ ಎಂದು ಸಿದ್ದರಾಮಯ್ಯ ವಿರುದ್ಧ ಹಿಗ್ಗಾ ಮುಗ್ಗಾ ಚಾಟಿ ಬೀಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...