alex Certify ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ: ಶಾಲೆಗಳಲ್ಲಿ ಅಕ್ಟೋಬರ್ 21 ರಿಂದ ‘ಬಿಸಿಯೂಟ’ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ: ಶಾಲೆಗಳಲ್ಲಿ ಅಕ್ಟೋಬರ್ 21 ರಿಂದ ‘ಬಿಸಿಯೂಟ’ ಆರಂಭ

ಬೆಂಗಳೂರು: ಅಕ್ಟೋಬರ್ 21 ರ ಗುರುವಾರದಿಂದ ಶಾಲೆಗಳಲ್ಲಿ ಬಿಸಿಯೂಟ ಆರಂಭಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಬಿಸಿಯೂಟ ನೀಡಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ಅಡುಗೆ ಕೋಣೆ, ದಾಸ್ತಾನು ಕೊಠಡಿ, ಕುಡಿಯುವ ನೀರಿನ ಸ್ಥಳಗಳನ್ನು ಸ್ವಚ್ಛಗೊಳಿಸಬೇಕು. ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಆಹಾರಧಾನ್ಯಗಳನ್ನು ಪರಿಶೀಲಿಸಿಕೊಳ್ಳಬೇಕು. ಅವಧಿ ಮೀರಿದ ಪದಾರ್ಥಗಳನ್ನು ಬಳಸಬಾರದು. ಸ್ಟವ್ ದುರಸ್ತಿ ಇದ್ದರೆ ದುರಸ್ತಿ ಮಾಡಿಸಿಕೊಳ್ಳಬೇಕು ಎಂದು ಹೇಳಲಾಗಿದೆ.

ಅಕ್ಟೋಬರ್ 21 ರೊಳಗೆ ಅಕ್ಕಿ, ಗೋಧಿ ಸರಬರಾಜು ಮಾಡಲಿದ್ದು, ಉಳಿದ ಆಹಾರ ಪದಾರ್ಥಗಳ ಖರೀದಿಗೆ ವಿದ್ಯಾರ್ಥಿಗಳ ಪರಿವರ್ತನಾ ನಿಧಿ ಬಳಸಿಕೊಳ್ಳಬೇಕೆಂದು ತಿಳಿಸಲಾಗಿದೆ. ಬಿಸಿಯೂಟಕ್ಕೆ ನಿಗದಿಪಡಿಸಲಾದ ಶಾಲಾ ಸಿಬ್ಬಂದಿ ಅಕ್ಟೋಬರ್ 20ರೊಳಗೆ ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲಿಸಿ ಸಿದ್ಧತೆ ಮಾಡಿಕೊಳ್ಳಬೇಕೆಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...