ಬೆಂಗಳೂರು: ಒಂದರಿಂದ ಐದನೇ ತರಗತಿ ಭೌತಿಕ ತರಗತಿಗಳನ್ನು ಆರಂಭಿಸಲು ಸರ್ಕಾರ ಸಿದ್ಧತೆ ಕೈಗೊಂಡಿದೆ. ತಜ್ಞರ ಸಮಿತಿಯ ವರದಿ ಆಧರಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಅಥವಾ ಮಂಗಳವಾರ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು, ತರಗತಿಗಳನ್ನು ಆರಂಭಿಸಲು ಅಗತ್ಯವಿರುವ ಎಲ್ಲ ಪೂರ್ವ ಸಿದ್ಧತೆ ಕೈಗೊಳ್ಳಲಾಗಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಕ್ರಮ ವಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.