ಬೆಂಗಳೂರು: ರಾಜ್ಯದ ಹಲವು ಕಡೆ ಬಲವಂತದ ಮತಾಂತರದ ದೂರು ಕೇಳಿಬರುತ್ತಿದೆ. ಬಲವಂತದ ಮತಾಂತರಕ್ಕೆ ಕಡಿವಾಣ ಹಾಕಲು ಕ್ರಮಕೈಗೊಳ್ಳಲಾಗಿದೆ.
ಅನಧಿಕೃತ ಚರ್ಚ್ ಗಳು ಮತ್ತು ಬಲವಂತದ ಮತಾಂತರಕ್ಕೆ ಕಡಿವಾಣ ಹಾಕಲು ರಾಜ್ಯದಲ್ಲಿನ ಚರ್ಚ್ ಗಳ ಸಮೀಕ್ಷೆಗೆ ವಿಧಾನಮಂಡಲ ಸಮಿತಿ ಸೂಚನೆ ನೀಡಿದೆ.
ವಿಧಾನಮಂಡಲದ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ರಾಜ್ಯದಲ್ಲಿನ ಚರ್ಚ್ ಗಳ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಸಮಿತಿಯ ಅಧ್ಯಕ್ಷ ದಿನಕರ ಶೆಟ್ಟಿ ಅವರ ಅನುಪಸ್ಥಿತಿಯಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಸೂಚನೆ ನೀಡಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಶಾಸಕ ಜೆ.ಆರ್. ಲೋಬೋ ಸಮಿತಿಯು ತನ್ನ ಮಿತಿಯನ್ನು ಮೀರಿ ಕ್ರೈಸ್ತರ ಮೇಲೆ ಬೇಹುಗಾರಿಕೆ ನಡೆಸಲು ಹೊರಟಂತಿದೆ. ರಾಜಕೀಯ ದುರುದ್ದೇಶದಿಂದ ಕ್ರೈಸ್ತ ಸಮುದಾಯದ ಮೇಲೆ ಮತಾಂತರ ಆರೋಪ ಮಾಡಲಾಗಿದೆ ಎಂದು ದೂರಿದ್ದಾರೆ.