
ಹುಬ್ಬಳ್ಳಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಜೊತೆಗೆ ಸಾಗಣೆ ವೆಚ್ಚ ಜಾಸ್ತಿಯಾಗಿ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗಿ ಜನಸಾಮಾನ್ಯರು ತತ್ತರಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡುವ ಸುಳಿವು ನೀಡಿದ್ದಾರೆ.
ಹುಬ್ಬಳ್ಳಿ ಏರ್ ಪೋರ್ಟ್ ನಲ್ಲಿ ಮಾತನಾಡಿದ ಅವರು, ತೈಲಬೆಲೆ ಆರ್ಥಿಕತೆಯ ಮೇಲೆ ನೇರ ಪರಿಣಾಮ ಬೀರುತ್ತದೆ. ರಾಜ್ಯದ ಆರ್ಥಿಕತೆ ಸುಧಾರಣೆಯಾದರೆ ಬೆಲೆ ಇಳಿಕೆಯಾಗುತ್ತದೆ. ಬೈಎಲೆಕ್ಷನ್ ನಂತರ ತೈಲ ಬೆಲೆ ಇಳಿಕೆ ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.
ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಲಿದೆ. ಎರಡೂ ಕ್ಷೇತ್ರಗಳಲ್ಲಿ ಭಾರಿ ಅಂತರದಿಂದ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.