ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನಡುವಿನ ಟ್ವೀಟ್ ವಾರ್ ಮುಂದುವರೆದಿದ್ದು, ಗಾಂಧೀಜಿ ಸಾಲುಗಳನ್ನು ಉಲ್ಲೇಖಿಸುವ ಮೂಲಕ ಇದೀಗ ಸಿದ್ದರಾಮಯ್ಯ, ಕುಮಾರಸ್ವಾಮಿಗೆ ಕೌಂಟರ್ ನೀಡಿದ್ದಾರೆ.
ಮಹಾತ್ಮಾ ಗಾಂಧೀಜಿ ಅವರನ್ನು ಹಿಂದೂ ವಿರೋಧಿ ಎನ್ನುತ್ತಿದ್ದ ಹಿಂದೂಗಳು, ದಲಿತ ವಿರೋಧಿ ಎನ್ನುತ್ತಿದ್ದ ದಲಿತರು, ಮುಸ್ಲಿಂ ವಿರೋಧಿ ಎನ್ನುತ್ತಿದ್ದ ಮುಸ್ಲಿಮರು ಇದ್ದರು. ಮಹಾತ್ಮರ ಬೆನ್ನು ಬಿಡದ ಟೀಕಾಕಾರರು ನನ್ನಂತಹ ಹುಲುಮಾನವರನ್ನು ಬಿಡುತ್ತಾರೆಯೇ ? ಸಬ್ ಕೋ ಸನ್ಮತಿ ದೇ ಭಗವಾನ್ ಎಂದು ಹೇಳುವ ಮೂಲಕ ಸಿದ್ದರಾಮಯ್ಯ, ಹೆಚ್.ಡಿ. ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ.
ಪ್ರೀತಿಸಿ ಮದುವೆಯಾದ ಪತ್ನಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಘೋರ ಕೃತ್ಯ, ಹತ್ಯೆ ಬಳಿಕ ಚಿನ್ನಾಭರಣದೊಂದಿಗೆ ಠಾಣೆಗೆ ಶರಣಾದ ಆರೋಪಿ
ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಮೂಲಕ ನಿನ್ನೆಯಷ್ಟೇ ಕಿಡಿಕಾರಿದ್ದ ಕುಮಾರಸ್ವಾಮಿ, ಕಾಂಗ್ರೆಸ್ ನಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯವೆಸಗಲಾಗುತ್ತಿದೆ. ಸ್ವಪಕ್ಷದ ಅಲ್ಪಸಂಖ್ಯಾತರನ್ನೇ ’ಸಿದ್ಧಹಸ್ತರು’ ತಮ್ಮ ಸಿದ್ದಕಲೆ ಮೂಲಕ ಬಲಿ ಪಡೆಯುತ್ತಿದ್ದಾರೆ. ರಾಜಕೀಯ ನರಮೇಧ ನಡೆಸಲಾಗುತ್ತಿದೆ ಎಂದು ಟೀಕಿಸಿದ್ದರು.