ಬೆಂಗಳೂರು: ಬೆಂಗಳೂರು ಸಿಟಿ ರೌಂಡ್ಸ್ ಹಾಕಿದ ಸಿಎಂ ಬಸವರಾಜ್ ಬೊಮ್ಮಾಯಿ ಕೇವಲ ಎರಡು ಗಂಟೆಗಳಲ್ಲಿ ಸಿಟಿ ರೌಂಡ್ಸ್ ಮುಗಿಸಿದ್ದಾರೆ.
ಮಳೆ ಹಾನಿ ಪ್ರದೇಶಗಳಿಗೆ ಭೇಟಿ ಕೊಟ್ಟ ಸಿಎಂ, ಬಿಬಿಎಂಪಿ, ಬಿಡಬ್ಲ್ಯೂ ಎಸ್ ಎಸ್ ಬಿ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಬಳಿಕ ಹೆಚ್.ಎಸ್.ಆರ್ ಲೇಔಟ್ ನಲ್ಲಿರುವ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿದರು.
ಬೊಮ್ಮನಹಳ್ಳಿ ವ್ಯಾಪ್ತಿಯಲ್ಲಿನ ವಿವಿಧ ಕಾಮಗಾರಿ ಸ್ಥಳಗಳಿಗೂ ಭೇಟಿ ನೀಡಿ ಸಿಎಂ ಪರಿಶೀಲಿಸಿದರು. ಇದೇ ವೇಳೆ ಮಂತ್ರಿ ಡವಲಪರ್ಸ್ ನಿಂದ ಒತ್ತುವರಿ ಆರೋಪ ಕೇಳಿಬಂದಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.