ಬೆಂಗಳೂರು: 1-ರಿಂದ 5ನೇ ತರಗತಿವರೆಗಿನ ಶಾಲೆ ಪುನರಾರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಮಾರ್ಗಸೂಚಿ ಕೂಡ ಪ್ರಕಟವಾಗಿದೆ.
ಅಕ್ಟೋಬರ್ 25ರಿಂದ 1-5ನೇ ತರಗತಿವರೆಗೆ ಶಾಲೆಗಳನ್ನು ಆರಂಭಿಸಲು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ಮಾರ್ಗಸೂಚಿ ಅನ್ವಯ ಅ.25ರಿಂದ ಪ್ರಾಥಮಿಕ ಶಾಲೆಗಳನ್ನು ತೆರೆಯಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಮಾರ್ಗಸೂಚಿ:
ಶಾಲೆಗಳಿಗೆ ಮಕ್ಕಳನ್ನು ಕಳುಹಿಸಲು ಪೋಷಕರ ಅನುಮತಿ ಕಡ್ಡಾಯ
ತರಗತಿಯಲ್ಲಿ ಶೇ.50ರಷ್ಟು ಮಾತ್ರ ವಿದ್ಯಾರ್ಥಿಗಳಿರಬೇಕು
ಒಂದು ಮಿಟರ್ ದೈಹಿಕ ಅಂತರ ಪಾಲನೆ
ಶಿಕ್ಷಕರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು.