ತುಮಕೂರು: ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ತೆಗೆಯುತ್ತಿದ್ದ ವ್ಯಕ್ತಿಯನ್ನು ಹಿಡಿದು ಹಿಗ್ಗಾ ಮುಗ್ಗಾ ಧರ್ಮದೇಟು ನೀಡಿರುವ ಘಟನೆ ತುಮಕೂರಿನ ವಿಶ್ವಗುರು ಸ್ಕ್ಯಾನಿಂಗ್ ಸೆಂಟರ್ ನಲ್ಲಿ ನಡೆದಿದೆ.
ಪ್ರಿಯಕರನೊಂದಿಗೆ ಸೇರಿ ಪತಿಗೆ ಯಮಲೋಕ ತೋರಿಸಿದ ಪತ್ನಿ
ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರ ಮೂಲದ ಹರೀಶ್ ಆರೋಪಿ. ಹರೀಶ್ ಸ್ತ್ರೀಯರ ಶೌಚಾಲಯದಲ್ಲಿ ತನ್ನ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ. ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಹರೀಶ್ ನನ್ನು ಸಾರ್ವಜನಿಕರು ಹಾಗೂ ಮಹಿಳೆಯರು ಹಿಗ್ಗಾ ಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರೋಪಿ ವಶಕ್ಕೆ ಪಡೆದಿರುವ ಹೊಸಬಡಾವಣೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.