ನವದೆಹಲಿ: ಮಕ್ಕಳಿಗೆ ಕೊರೋನಾ ಲಸಿಕೆ ನೀಡುವ ಅಭಿಯಾನಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು. ಕೋವಿಡ್ -19 ಕ್ರಿಯಾ ಸಮಿತಿ ಅಧ್ಯಕ್ಷ ಎನ್.ಕೆ. ಆರೋರಾ ಅವರು ಈ ಕುರಿತಾಗಿ ಮಾಹಿತಿ ನೀಡಿದ್ದು, ಮಕ್ಕಳಿಗೆ ಕೊರೋನಾ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಆರಂಭದಲ್ಲಿ ರೋಗನಿರೋಧಕ ಶಕ್ತಿ ಕಳೆದುಕೊಂಡ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಆದ್ಯತಾ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ. ಪಟ್ಟಿ ಪೂರ್ಣಗೊಂಡ ಬಳಿಕ ಮಕ್ಕಳಿಗೆ ಹಂತ ಹಂತವಾಗಿ ಲಸಿಕೆ ನೀಡಲಾಗುವುದು. ಕೆಲವು ರೋಗಗಳ ಕಾರಣದಿಂದ ರೋಗನಿರೋಧಕ ಶಕ್ತಿ ಕಳೆದುಕೊಂಡ 18 ವರ್ಷದ ಮಕ್ಕಳಿಗೆ ಲಸಿಕೆ ನೀಡಲಾಗುವುದು.
ಅಧ್ಯಯನದ ಪ್ರಕಾರ, ಮಕ್ಕಳ ಮೇಲೆ ಕೊರೋನಾ ಸೋಂಕು ಹೆಚ್ಚಿನ ಪರಿಣಾಮ ಬೀರುವುದಿಲ್ಲ. ಆದರೆ, ಸೋಂಕು ತಗುಲಿದ ಮಕ್ಕಳು ಸೂಪರ್ ಸ್ಪ್ರೆಡರ್ ಗಳಾಗುವ ಸಾಧ್ಯತೆ ಇರುವುದರಿಂದ 18 ವರ್ಷದ ಸುಮಾರು 44 ಕೋಟಿ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎನ್ನಲಾಗಿದೆ.