ರಾಜಸ್ಥಾನದ ಜೈಪುರದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಯುವತಿಗೆ ಡ್ರಗ್ಸ್ ನೀಡಿ ಐವರು ಕಾಮುಕರು ಪೈಶಾಚಿಕ ಕೃತ್ಯ ಎಸಗಿದ್ದಾರೆ.
19 ವರ್ಷದ ಯುವತಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ಆಕೆಗೆ ಡ್ರಗ್ಸ್ ನೀಡಿದ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಜೈಪುರದ ಶ್ಯಾಮ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.