ದುಬೈ: ಟಿ20 ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಅಕ್ಟೋಬರ್ 24 ರಂದು ಮೊದಲ ಪಂದ್ಯವನ್ನು ಆಡಲಿದೆ.
ಪಾಕಿಸ್ತಾನ ವಿರುದ್ಧ ಮೊದಲ ಪಂದ್ಯವನ್ನಾಡಲಿರುವ ಭಾರತ ಇದಕ್ಕಿಂತ ಮೊದಲು ನಡೆದ ಎರಡು ಅಭ್ಯಾಸ ಪಂದ್ಯಗಳನ್ನು ಜಯಿಸಿ ಭರ್ಜರಿ ವಿಶ್ವಾಸದಲ್ಲಿದೆ.
ಅಕ್ಟೋಬರ್ 18 ರಂದು ಮೊದಲ ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 7 ವಿಕೆಟ್ ಗಳಿಂದ ಮಣಿಸಿದ್ದು, ಎರಡನೇ ಅಭ್ಯಾಸ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು 9 ವಿಕೆಟುಗಳ ಅಂತರದಿಂದ ಮಣಿಸಿದೆ.
ಎರಡೂ ಅಭ್ಯಾಸ ಪಂದ್ಯಗಳಲ್ಲಿ ಭರ್ಜರಿ ಜಯಗಳಿಸಿರುವ ಭಾರತ ಅಕ್ಟೋಬರ್ 24ರಂದು ಪಾಕಿಸ್ತಾನ ತಂಡವನ್ನು ಬಗ್ಗು ಬಡಿಯಲು ಸಜ್ಜಾಗಿದೆ.