ಬೆಂಗಳೂರು: ಅಕ್ಟೋಬರ್ 25 ರಿಂದ ಒಂದರಿಂದ ಐದನೇ ತರಗತಿ ಆರಂಭಿಸಲಾಗುವುದು. ಶಾಲೆ ಆರಂಭಕ್ಕೆ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸಲಾಗಿದೆ.
ಅಕ್ಟೋಬರ್ 25 ರಿಂದ 30 ರವರೆಗೆ ಮಾತ್ರ ಅರ್ಧ ದಿನ ತರಗತಿಗಳು ನಡೆಯಲಿವೆ. ನವೆಂಬರ್ 2 ರಿಂದ ಪೂರ್ಣಾವಧಿ ತರಗತಿಗಳನ್ನು ನಡೆಸಲಾಗುವುದು. ಮಕ್ಕಳು ಶಾಲೆಗೆ ಬರಲು ಪೋಷಕ ಒಪ್ಪಿಗೆ ಕಡ್ಡಾಯವಾಗಿದ್ದು, ಅಕ್ಟೋಬರ್ 30 ರ ವರೆಗೂ ಮಧ್ಯಾಹ್ನದ ಬಿಸಿಯೂಟ ಇರುವುದಿಲ್ಲ. ನವೆಂಬರ್ 2 ರಿಂದ ಶಾಲೆಗಳಲ್ಲಿ ಬಿಸಿಯೂಟದ ವ್ಯವಸ್ಥೆ ಮಾಡಲಾಗುವುದು. ಅನುದಾನರಹಿತ ಶಾಲೆಗಳಲ್ಲಿ ಮಕ್ಕಳಿಗೆ ಊಟ ತರಬೇಕು.
ಎಲ್ಲಾ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಕೊಠಡಿಯಲ್ಲಿ 15 ರಿಂದ 20 ಮಕ್ಕಳ ತಂಡ ರಚಿಸಿ ಪಾಠ ಮಾಡಬೇಕು. ಶಾಲೆಯಲ್ಲಿ ಮಕ್ಕಳಿಗೆ ತಪಾಸಣೆ ನಡೆಸಬೇಕು. ಗೇಟ್ ಬಳಿ ಮಕ್ಕಳಿಗೆ ಕೋವಿಡ್ ತಪಾಸಣೆ ನಡೆಸಬೇಕು. ಕೊರೋನಾ ಕಂಡುಬಂದರೆ ಶಾಲೆ ಸ್ಯಾನಿಟೈಸ್ ಮಾಡಬೇಕು. ಮುಂದಿನ ಆದೇಶದವರೆಗೆ ಎಲ್ಕೆಜಿ-ಯುಕೆಜಿ ಆರಂಭಿಸುವಂತಿಲ್ಲ.
ಶಿಕ್ಷಕರು, ಮಕ್ಕಳು ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ. ಅದೇ ರೀತಿ ಶಿಕ್ಷಕರು ಎರಡು ಡೋಸ್ ಲಸಿಕೆ ಪಡೆದಿರುವುದು ಕಡ್ಡಾಯವಾಗಿದೆ. 50 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ಫೇಸ್ ಶೀಲ್ಡ್ ಕಡ್ಡಾಯವಾಗಿದೆ ಎಂದು ಹೇಳಲಾಗಿದೆ.