ಬೆಳಗಾವಿ: ಹಾಲು ಖರೀದಿಗೆ ಏಕರೂಪ ದರ ನಿಗದಿ ಮಾಡಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಎಲ್ಲಾ ಸಹಕಾರಿ ಹಾಲು ಒಕ್ಕೂಟಗಳಲ್ಲಿ ಹಾಲು ಖರೀದಿಗೆ ಏಕರೂಪದ ದರ ನಿಗದಿ ಮಾಡಲಾಗುವುದು. ಕೆಲವು ಹಾಲು ಒಕ್ಕೂಟಗಳಲ್ಲಿ ಹಾಲಿನ ಖರೀದಿ ದರದಲ್ಲಿ ವ್ಯತ್ಯಾಸವಿದೆ. ಮಹಾ ಮಂಡಳಿ ಸಭೆಯಲ್ಲಿ ಏಕರೂಪ ದರ ನಿಗದಿ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕೆಎಂಎಫ್ ನಿಂದ ಜಾನುವಾರು ವಿಮಾ ಯೋಜನೆ ಜಾರಿಗೊಳಿಸಲಾಗಿದೆ. ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲು ಪೂರೈಕೆ ಮಾಡುವವರ ಜಾನುವಾರು ಮೃತಪಟ್ಟ ಸಂದರ್ಭದಲ್ಲಿ 50 ಸಾವಿರ ರೂಪಾಯಿವರೆಗೆ ವಿಮೆ ಸೌಲಭ್ಯ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.