ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಾಯಕತ್ವ ತೊರೆಯುವ ನಿರ್ಧಾರದ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮೌನ ಮುರಿದಿದ್ದಾರೆ.
ನಾಯಕತ್ವ ತೊರೆಯುವಂತೆ ನಮ್ಮಿಂದ ಒತ್ತಡ ಇರಲಿಲ್ಲ. ಅವರು ನಾಯಕತ್ವ ತೊರೆಯುವ ನಿರ್ಧಾರ ತಿಳಿಸಿದಾಗ ಆಘಾತವಾಗಿತ್ತು ಎಂದು ಗಂಗೂಲಿ ಹೇಳಿದ್ದಾರೆ. ನಾಯಕತ್ವ ತೊರೆಯುವಂತೆ ಕೊಹ್ಲಿ ಮೇಲೆ ಬಿಸಿಸಿಐ ಒತ್ತಡ ಹೇರಿರಲಿಲ್ಲ. ವಿರಾಟ್ ಕೊಹ್ಲಿ ಅವರೇ ಸ್ವಂತ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಟಿ20, ಏಕದಿನ ಮತ್ತು ಟೆಸ್ಟ್ ತಂಡಗಳನ್ನು ಮುನ್ನಡೆಸುವುದು ಸುಲಭದ ಮಾತಲ್ಲ. ಅವರು ನಾಯಕತ್ವ ತೊರೆಯುವ ನಿರ್ಧಾರವನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ಅವರ ಮೇಲೆ ಯಾವುದೇ ಒತ್ತಡ ಇರಲಿಲ್ಲ. ಅವರಿಗೆ ಏನನ್ನೂ ಹೇಳಿರಲಿಲ್ಲ. ನಾನು ಆಟಗಾರನಾಗಿದ್ದರಿಂದ ಮತ್ತು ನಾಯಕನಾಗಿ 6 ವರ್ಷ ಕಾರ್ಯನಿರ್ವಹಿಸಿದ್ದರಿಂದ ಇಷ್ಟು ದಿನ ನಾಯಕನ ನಿರ್ವಹಿಸುವುದು ಕಷ್ಟವೆಂಬುದನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.