ಬೆಂಗಳೂರು: 1242 ಸಹಾಯಕರ ಪ್ರಾಧ್ಯಾಪಕರ ಹುದ್ದೆಗೆ ನೇಮಕಾತಿ ನಿಯಮದಲ್ಲಿ ಕೊಂಚ ಸಡಿಲಿಕೆ ಮಾಡಲಾಗಿದೆ. ಪಿಜಿ ಪಾಸಾಗುವ ಮೊದಲೇ ಕೆ -ಸೆಟ್ ಪಾಸಾಗಿದ್ದರೆ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಈ ಬಗ್ಗೆ ವೆಬ್ಸೈಟ್ ನಲ್ಲಿ ಮಾಹಿತಿ ನೀಡಲಾಗಿದೆ. ಒಟ್ಟು ಹುದ್ದೆಗಳಲ್ಲಿ 158 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. 1242 ಹುದ್ದೆಗಳಿಗೂ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ನಿಯಮಗಳಲ್ಲಿ ಅಲ್ಪ ಸಡಿಲಿಕೆ ಮಾಡಲಾಗಿದೆ. ನಂತರ ಪದವಿ ಉತ್ತೀರ್ಣರಾದವರು ಕೂಡ ಅರ್ಜಿ ಸಲ್ಲಿಸಬಹುದು. 2021 ರಲ್ಲಿ ಪಿಜಿ ಪಾಸಾದ ಅಭ್ಯರ್ಥಿಗಳು, ನೆಟ್, ಸ್ಲೆಟ್ ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು, ಸರ್ಕಾರಿ ಹುದ್ದೆಯಲ್ಲಿ ಇರುವ ಅರ್ಜಿಸಲ್ಲಿಸಲು ನಿರಾಕ್ಷೇಪಣ ಪತ್ರ ಪಡೆಯದ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಎಂದು ಹೇಳಲಾಗಿದೆ.