ಬೆಂಗಳೂರು: ಅಕ್ಟೋಬರ್ 25 ರಿಂದ ರಾಜ್ಯದಲ್ಲಿ ಒಂದರಿಂದ ಐದನೇ ತರಗತಿಗಳು ಆರಂಭವಾಗಲಿದ್ದು, ನಂತರದ ಪರಿಸ್ಥಿತಿ ಆಧರಿಸಿ ಎಲ್ಕೆಜಿ-ಯುಕೆಜಿ ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದರಿಂದ ಐದನೇ ತರಗತಿ ಸೋಮವಾರದಿಂದ ಆರಂಭವಾಗಲಿದ್ದು, ಮಕ್ಕಳ ಹಾಜರಾತಿ ಸುಧಾರಣೆ ಕಾಣುತ್ತಿದೆ. ಬಿಸಿಯೂಟ ಕೂಡ ಆರಂಭವಾಗಲಿದ್ದು, ಮಕ್ಕಳ ಹಾಜರಾತಿ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದಲ್ಲಿಯೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಗೆ ಬರುತ್ತಿದ್ದಾರೆ. ಒಂದರಿಂದ ಐದನೇ ತರಗತಿ ಆರಂಭಿಸಿದ ಬಳಿಕ ಪರಿಸ್ಥಿತಿ ಆಧರಿಸಿ ಎಲ್ಕೆಜಿ-ಯುಕೆಜಿ ಕೂಡ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.