ಬಾಹುಬಲಿ ಖ್ಯಾತಿಯ ಪ್ರಭಾಸ್ ಇಂದು 42ನೇ ವಸಂತಕ್ಕೆ ಕಾಲಿಟ್ಟಿದ್ದು, ಇಂದು ಅವರ ಬಹುನಿರೀಕ್ಷೆಯ ‘ರಾಧೆಶ್ಯಾಮ್’ ಚಿತ್ರದ ಟೀಸರ್ ಅನ್ನು ಟಿ ಸಿರೀಸ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟೀಸರ್ ರಿಲೀಸ್ ಆದ ಕೆಲವೇ ನಿಮಿಷಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದಿದೆ.
ಭೂತದ ವೇಷದಲ್ಲಿ ಹೆದರಿಸಲು ಹೋಗಿ ಪ್ರಾಣ ಬಿಟ್ಟ ಯುವತಿ
ರಾಧಾಕೃಷ್ಣ ಕುಮಾರ್ ಈ ಚಿತ್ರವನ್ನು ನಿರ್ದೇಶಿಸಿದ್ದು, ಯುವಿ ಕ್ರಿಯೇಷನ್ಸ್ ಹಾಗೂ ಟಿ ಸಿರೀಸ್ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿದೆ. ಪ್ರಭಾಸ್ ಗೆ ಜೋಡಿಯಾಗಿ ಪೂಜಾ ಹೆಗ್ಡೆ ಅಭಿನಯಿಸಿದ್ದಾರೆ.
ಕೃಷ್ಣಂ ರಾಜು, ಪ್ರಿಯದರ್ಶಿ, ಮುರಳಿ ಶರ್ಮ, ಸತ್ಯನ್ ಸೇರಿದಂತೆ ಮೊದಲಾದ ಕಲಾವಿದರು ಈ ಸಿನಿಮಾದಲ್ಲಿ ತೆರೆಹಂಚಿಕೊಂಡಿದ್ದಾರೆ. ಮುಂದಿನ ವರ್ಷ ಜನವರಿ 14ರಂದು 6 ಭಾಷೆಯಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ.