ನನ್ನ ಅಧಿಕಾರಾವಧಿಯಲ್ಲಿ 15 ಲಕ್ಷ ಮನೆ ಕಟ್ಟಿಸಿಕೊಟ್ಟಿದ್ದೇನೆ ಎಂದು ಹೇಳಿದ್ದ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಸರಣಿ ಟ್ವೀಟ್ಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.
‘ಸಿದ್ದರಾಮಯ್ಯನವರೇ, ಇನ್ನೆಷ್ಟು ದಿನ ಸಂತೆ ಭಾಷಣೆ ಮಾಡುತ್ತೀರಿ..?ನೀವು ಘೋಷಣೆ ಮಾಡಿದ 15 ಲಕ್ಷ ಮನೆ ಎಲ್ಲಿದೆ ?ಭೂಮಿಯ ಮೇಲಿದೆಯೋ, ಮಂಗಳ ಗ್ರಹದಲ್ಲಿದೆಯೋ ? ಕೇವಲ ಘೋಷಣೆ ಮಾಡಿದ ಮಾತ್ರಕ್ಕೆ ಮನೆ ನಿರ್ಮಾಣವಾಗುತ್ತದೆಯೇ ? ಮಂತ್ರಕ್ಕೆ ಮಾವಿನ ಕಾಯಿ ಉದುರುತ್ತದೆಯೇ?’ ಎಂದು ಪ್ರಶ್ನೆ ಮಾಡಿದೆ.
ಅಧಿಕಾರಾವಧಿಯ ಕೊನೆಯಲ್ಲಿ “ಮುಖ್ಯಮಂತ್ರಿ 1 ಲಕ್ಷ ಮನೆ” ಯೋಜನೆಯನ್ನು ಬೆಂಗಳೂರು ನಗರದ ಬಡವರಿಗೆ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಆದರೆ ಬಜೆಟ್‌ನಲ್ಲಿ ಸೂಕ್ತ ಅನುದಾನ ಕಾಯ್ದಿರಿಸಲಿಲ್ಲ. ಮನೆಕಟ್ಟುವುದಕ್ಕೆ ಆಯ್ದುಕೊಂಡ ಜಾಗವೇ ವಿವಾದಗ್ರಸ್ಥವಾಗಿತ್ತು. ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯಗೆ ಪಿಹೆಚ್ಡಿ ನೀಡಬಹುದು ಎಂದು ವ್ಯಂಗ್ಯವಾಡಿದೆ.
ಸಿದ್ದರಾಮಯ್ಯ ಅವರೇ, ಕೃಷ್ಣಾ ಕಣಿವೆ ನೀರಾವರಿ ಯೋಜನೆಗೆ ವಾರ್ಷಿಕ 10 ಸಾವಿರ ಕೋಟಿ ಅನುದಾನ ನೀಡುತ್ತೇನೆಂದು ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಪಾದಯಾತ್ರೆ ಸಂದರ್ಭದಲ್ಲಿ ಘೋಷಣೆ ಮಾಡಿದ್ದಿರಿ. ಆದರೆ ಕೊಟ್ಟಿದ್ದು ಬಿಡಿಗಾಸು. ಅಂಗೈಯಲ್ಲಿ ಆಕಾಶ ತೋರಿಸುವ ವಿಚಾರದಲ್ಲಿ ನೀವು ಪ್ರವೀಣರಲ್ಲವೇ ಎಂದು ಲೇವಡಿ ಮಾಡಿದೆ.