ನವದೆಹಲಿ: 100 ಕೋಟಿ ಡೋಸ್ ಕೊರೋನಾ ಲಸಿಕೆ ನೀಡಿಕೆ ನಂತರ ದೇಶವು ಹೊಸ ಶಕ್ತಿಯೊಂದಿಗೆ ಮುನ್ನಡೆಯುತ್ತಿದೆ. ನಮ್ಮ ಲಸಿಕೆ ಕಾರ್ಯಕ್ರಮದ ಯಶಸ್ಸು ಭಾರತದ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿದೆ ಎಂದು ‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.
ಇಂದು 82 ನೇ ಆವೃತ್ತಿಯ ‘ಮನ್ ಕಿ ಬಾತ್’ನಲ್ಲಿ ಮಾಸಿಕ ರೇಡಿಯೋ ಕಾರ್ಯಕ್ರಮದ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದ ಜನರ ಸಾಮರ್ಥ್ಯಗಳ ಬಗ್ಗೆ ನಮಗೆ ತಿಳಿದಿದೆ. ನಮ್ಮ ಆರೋಗ್ಯ ಕಾರ್ಯಕರ್ತರು ದೇಶವಾಸಿಗಳಿಗೆ ಲಸಿಕೆ ಹಾಕಲು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಕ್ಟೋಬರ್ 31 ರಂದು ರಾಷ್ಟ್ರೀಯ ಏಕತೆಯ ದಿನವಾಗಿ ಆಚರಿಸುತ್ತೇವೆ. ರಾಷ್ಟ್ರೀಯ ಏಕತೆಯನ್ನು ಉತ್ತೇಜಿಸುವ ಕನಿಷ್ಠ ಒಂದು ಚಟುವಟಿಕೆಯೊಂದಿಗೆ ನಾವು ಸಹಭಾಗಿಯಾಗಬೇಕು ಎಂದು ತಿಳಿಸಿದ್ದಾರೆ.