ಗಾಜಿಯಾಬಾದ್: ಮಹತ್ವದ ಕಾರ್ಯಾಚರಣೆ ನಡೆಸಿರುವ ಗಾಜಿಯಾಬಾದ್ ಪೊಲೀಸರು ನಾಲ್ವರು ಮಹಿಳೆಯರು ಮತ್ತು ಒಬ್ಬ ಪುರುಷನನ್ನು ಬಂಧಿಸಿದ್ದಾರೆ. ‘ಸ್ಟ್ರಿಪ್ಚಾಟ್’ ಹೆಸರಿನ ಆನ್ಲೈನ್ ಪ್ಲಾಟ್ಫಾರ್ಮ್ ಮೂಲಕ ನಡೆಸುತ್ತಿದ್ದ ಸೆಕ್ಸ್ ಟಾರ್ಷನ್ ರಾಕೆಟ್ ಅನ್ನು ಭೇದಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ನೀಡಿರುವ ಪ್ರಕಾರ, ಆರೋಪಿಗಳು ‘ಸ್ಟ್ರಿಪ್ಚಾಟ್’ ನಲ್ಲಿ ಜನರೊಂದಿಗೆ ಸಂವಹನ ನಡೆಸುತ್ತಿದ್ದರು. ನಂತರ ಹಣ ವಸೂಲಿ ಮಾಡಲು ತಮ್ಮ ನ್ಯೂಡ್ ವಿಡಿಯೋ ಕ್ಲಿಪ್ಗಳನ್ನು ಮಾಡಿ, ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕುವ ಮೂಲಕ ಸಂತ್ರಸ್ತರಿಗೆ ಹಣ ನೀಡುವಂತೆ ಬ್ಲಾಕ್ಮೇಲ್ ಮಾಡಿದ್ದಾರೆ.
ಗುಜರಾತ್ನ ರಾಜ್ಕೋಟ್ ನಲ್ಲಿ ಒಬ್ಬ ವ್ಯಕ್ತಿಯಿಂದ 80 ಲಕ್ಷ ರೂಪಾಯಿ ಸುಲಿಗೆ ಮಾಡಲಾಗಿದೆ ಎಂದು ಮಾಹಿತಿ ಸಿಕ್ಕಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸೈಬರ್ ಸೆಲ್ ಹಾಗೂ ನಂದಗ್ರಾಮ ಪೊಲೀಸ್ ಠಾಣೆಯ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ಆರೋಪಿಗಳ ಪತ್ತೆಗೆ ರಚಿಸಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಮಹಿಳೆಯರು ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಕೆಲವು ಸೆಕ್ಸ್ ಆಟಿಕೆಗಳು, ಮಹಿಳೆಯರ ಒಳ ಉಡುಪು, ಆಭರಣಗಳು, ಮೊಬೈಲ್ ಫೋನ್ಗಳು ಮತ್ತು ಲ್ಯಾಪ್ಟಾಪ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 8 ಬ್ಯಾಂಕ್ ಖಾತೆಗಳ ವಿವರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 4 ಬ್ಯಾಂಕ್ ಖಾತೆಗಳಿಂದ 3,80,00,000 ರೂ. ಮೌಲ್ಯದ ವಹಿವಾಟು ನಡೆದಿದೆ, ಪೊಲೀಸರು ಶೀಘ್ರದಲ್ಲೇ ಇತರ ಬ್ಯಾಂಕ್ ಖಾತೆಗಳ ಮಾಹಿತಿ ಮತ್ತು ಎಲ್ಲಾ ಖಾತೆಗಳ ಹಣ ವರ್ಗಾವಣೆ ಮಾಹಿತಿ ಪಡೆಯಲಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ, ಮುಂಬೈ ಪೊಲೀಸರು ಸೆಕ್ಸ್ ರಾಕೆಟ್ ಭೇದಿಸಿದ್ದಾರೆ. ಇಬ್ಬರು ಹೋಟೆಲ್ ವ್ಯವಸ್ಥಾಪಕರು ಮತ್ತು ಮಹಿಳಾ ಪಿಂಪ್ ಅನ್ನು ಬಂಧಿಸಲಾಗಿದೆ. ಮಲಾಡ್ ನ ಮನೋರಿ ಪ್ರದೇಶದಲ್ಲಿ ಗುರುವಾರ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರು ಸೇರಿದಂತೆ ಕನಿಷ್ಠ ನಾಲ್ವರು ಮಹಿಳೆಯರನ್ನು ಪೊಲೀಸರು ರಕ್ಷಿಸಿದ್ದಾರೆ.
ಭಾರತೀಯ ದಂಡ ಸಂಹಿತೆ(ಐಪಿಸಿ), ಅನೈತಿಕ ಕಳ್ಳಸಾಗಣೆ ತಡೆ ಕಾಯ್ದೆ(ಪಿಐಟಿಎ) ಮತ್ತು ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯ ವಿವಿಧ ನಿಯಮಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.