ದುಬೈ: ಭಾರತ -ಪಾಕಿಸ್ತಾನ ತಂಡಗಳ ವಿಶ್ವಕಪ್ ಟಿ20 ಪಂದ್ಯದಲ್ಲಿ ಪಾಕಿಸ್ತಾನ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ದುಬೈ ಅಂತರಾಷ್ಟ್ರೀಯ ಮೈದಾನದಲ್ಲಿ ನಡೆಯುತ್ತಿರುವ ಟಿ20 ಪಂದ್ಯದಲ್ಲಿ ಪಾಕಿಸ್ತಾನ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದೆ.
ಟಿ20 ವಿಶ್ವಕಪ್ ನ ಹೈ ವೋಲ್ಟೇಜ್ ಮ್ಯಾಚ್ ಎಂದೇ ಹೇಳಲಾಗಿರುವ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಇಂದು ಗೆಲುವಿಗಾಗಿ ಕಾದಾಟ ನಡೆಯಲಿದೆ.
5 ವಿಶ್ವಕಪ್ ಗಳಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದು, ಎಲ್ಲಾ ಪಂದ್ಯಗಳಲ್ಲಿ ಭಾರತ ತಂಡ ಜಯಗಳಿಸಿದೆ. ಒಟ್ಟು 8 ಸಲ ಭಾರತ-ಪಾಕ್ ತಂಡ ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಭಾರತ 7 ಬಾರಿ ಮತ್ತು ಪಾಕಿಸ್ತಾನ 1 ಬಾರಿ ಜಯಗಳಿಸಿದೆ. ಪಂದ್ಯದ ಬಗ್ಗೆ ಕುತೂಹಲ ಭಾರಿ ಹೆಚ್ಚಿದೆ.
ಭಾರತ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.
ಪಾಕಿಸ್ತಾನ: ಬಾಬರ್ ಅಜಮ್, ಮೊಹಮ್ಮದ್ ರಿಜ್ವಾನ್, ಫಖರ್ ಜಮಾನ್, ಮೊಹಮ್ಮದ್ ಹಫೀಜ್, ಶೋಯೆಬ್ ಮಲಿಕ್, ಆಸಿಫ್ ಅಲಿ, ಇಮಾದ್ ವಾಸಿಮ್, ಶಾದಾಬ್ ಖಾನ್, ಹಸನ್ ಅಲಿ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ