ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರೊಬೇಷನರಿ ಆಫೀಸರ್(ಎಸ್ಬಿಐ ಪಿಒ) ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. 2000 ಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಅಕ್ಟೋಬರ್ 25 ರೊಳಗೆ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
SBI ನ ಅಧಿಕೃತ ವೆಬ್ಸೈಟ್(sbi.co.in)ನಲ್ಲಿ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ. 2,056 ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಸಾಮಾನ್ಯ ವರ್ಗ – 810
ಪರಿಶಿಷ್ಟ ಜಾತಿ(SC) – 324
ಪರಿಶಿಷ್ಟ ಪಂಗಡ(ST) – 162
ಇತರೆ ಹಿಂದುಳಿದ ವರ್ಗಗಳು(ಒಬಿಸಿ) – 560
ಆರ್ಥಿಕವಾಗಿ ದುರ್ಬಲ ವಿಭಾಗ(EWS) – 200
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಅಥವಾ ಯಾವುದೇ ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ತಮ್ಮ ಪದವಿಯ ಅಂತಿಮ ವರ್ಷ/ಸೆಮಿಸ್ಟರ್ನಲ್ಲಿರುವವರು ಸಂದರ್ಶನಕ್ಕೆ ಕರೆದರೆ, ಅವರು ಡಿಸೆಂಬರ್ 31, 2021 ರಂದು ಅಥವಾ ಅದಕ್ಕೂ ಮೊದಲು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪುರಾವೆಯನ್ನು ಒದಗಿಸಬೇಕಿದೆ.
ಇಂಟಿಗ್ರೇಟೆಡ್ ಡ್ಯುಯಲ್ ಡಿಗ್ರಿ(IDD) ಪ್ರಮಾಣಪತ್ರವನ್ನು ಹೊಂದಿರುವ ಅಭ್ಯರ್ಥಿಗಳು IDD ಪಾಸ್ ಮಾಡುವ ದಿನಾಂಕವು ಡಿಸೆಂಬರ್ 31, 2021 ರಂದು ಅಥವಾ ಅದಕ್ಕಿಂತ ಮೊದಲು ಎಂಬುದನ್ನು ಗಮನಿಸಬೇಕು.
ಚಾರ್ಟರ್ಡ್ ಅಕೌಂಟೆಂಟ್ ಅಥವಾ ಕಾಸ್ಟ್ ಅಕೌಂಟೆಂಟ್ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಯು 21 ವರ್ಷಕ್ಕಿಂತ ಕಡಿಮೆಯಿರಬಾರದು. ಏಪ್ರಿಲ್ 1, 2021 ಕ್ಕೆ 30 ವರ್ಷ ಮೀರಿರಬಾರದು. ಎಸ್ಸಿ, ಎಸ್ಟಿ, ಒಬಿಸಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ಭಾರತದಾದ್ಯಂತ ಎಲ್ಲಿ ಬೇಕಾದರೂ ಪೋಸ್ಟ್ ಮಾಡಬಹುದಾಗಿದೆ.