ರಾಜ್ಯಾದ್ಯಂತ 1 ರಿಂದ 10 ನೇ ತರಗತಿ ಆರಂಭವಾಗಿದ್ದು, ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಕೂಡ ಆರಂಭಿಸಲಾಗಿದೆ.
ಮಕ್ಕಳಿಗೆ ಅಗತ್ಯವಾದ ಪೌಷ್ಠಿಕ ಅಂಶ ಒಳಗೊಂಡ ಸಾರವರ್ಧಿತ ಅಕ್ಕಿಯನ್ನು ಸಾಮಾನ್ಯ ಅಕ್ಕಿಯೊಂದಿಗೆ ಮಿಶ್ರಣ ಮಾಡಿ ಬಿಸಿಯೂಟದಲ್ಲಿ ನೀಡಲಾಗುತ್ತದೆ. ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಬಿಸಿಯೂಟ ನೀಡುತ್ತಿದ್ದು, ಇದರಲ್ಲಿ ಸಾರವರ್ಧಿತ ಅಕ್ಕಿ ಬಳಕೆ ಮಾಡಲಾಗುವುದು.
ಒಂದರಿಂದ ಎಂಟನೇ ತರಗತಿ ಮಕ್ಕಳ ಬಿಸಿಯೂಟಕ್ಕೆ ಕೇಂದ್ರ ಸರ್ಕಾರ ಅಕ್ಕಿ ನೀಡುತ್ತಿದ್ದು, ಪ್ರತಿ ಕ್ವಿಂಟಲ್ ಗೆ 10 ಕೆಜಿಯಂತೆ ಸಾರವರ್ಧಿತ ಅಕ್ಕಿಯನ್ನು ಮಿಶ್ರಣ ಮಾಡಲಾಗಿದೆ. ಅಕ್ಕಿಯ ರೂಪದಲ್ಲಿರುವ ಸಾರವರ್ಧಿತ ಅಕ್ಕಿಯಲ್ಲಿ ಕಬ್ಬಿಣಾಂಶ, ಫೋಲಿಕ್ ಆಸಿಡ್, ವಿಟಮಿನ್ ಎ, ವಿಟಮಿನ್ ಬಿ12, ಸತು ಮೊದಲಾದವುಗಳನ್ನು ಒಳಗೊಂಡಿರುತ್ತದೆ. ಅಕ್ಕಿಕಾಳಿನ ರೂಪದಲ್ಲಿ ಇದನ್ನು ತಯಾರಿಸಲಾಗಿದೆ. ಈ ಅಕ್ಕಿ ಪರೀಕ್ಷೆಗೆ ಒಳಪಡಿಸಿ ಸೇವನೆಗೆ ಯೋಗ್ಯವೆಂದು ಸಾಬೀತಾದ ನಂತರ ಹಂಚಿಕೆ ಮಾಡಲಾಗಿದೆ ಎಂದು ಹೇಳಲಾಗಿದೆ.