alex Certify BIG NEWS: ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ಓಪನ್; ದೇವರ ದರ್ಶನಕ್ಕೆ ವ್ಯಾಕ್ಸಿನ್ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ಓಪನ್; ದೇವರ ದರ್ಶನಕ್ಕೆ ವ್ಯಾಕ್ಸಿನ್ ಕಡ್ಡಾಯ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲನ್ನು ತೆರೆಯಲಾಗಿದ್ದು, ಜಿಲ್ಲಾಡಳಿತದ ಸಮ್ಮುಖದಲ್ಲಿ ಅರ್ಚಕರು ಹಾಸನಾಂಬೆಗೆ ವಿಶೇಷ ಪೂಜೆ ನೇರವೇಸಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಕಳೆದ ವರ್ಷ ಹಾಸನಾಂಬೆ ದರ್ಶನಕ್ಕೆ ಸಾರ್ವಜನಕರಿಗೆ ನಿರ್ಬಂಧ ಹೇರಲಾಗಿತ್ತು. ಈ ವರ್ಷ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಆದರೆ ದೇವಾಲಯದ ಬಾಗಿಲು ತೆರೆದ ಮೊದಲ ದಿನವಾದ ಇಂದು ಆಹ್ವಾನಿತ ಗಣ್ಯರು, ಶಾಸಕರು, ಸಂಸದರು, ನಗರಸಭೆ ಸದಸ್ಯರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ನಾಳೆಯಿಂದ ಎಲ್ಲಾ ಭಕ್ತರಿಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಪಬ್ ​​ನಲ್ಲಿ ಮದ್ಯ​ ಆರ್ಡರ್​ ಮಾಡಿ ಮುಖ ಸುಟ್ಟುಕೊಂಡ ಮಹಿಳೆ…! ಕೋರ್ಟ್‌ ಮೆಟ್ಟಿಲೇರಿದಾಕೆಗೆ ಕೊನೆಗೂ ಸಿಕ್ತು ಪರಿಹಾರ

ಇಂದಿನಿಂದ ನವೆಂಬರ್ 5ರವರೆಗೂ ಹಾಸನಾಂಬೆ ದೇವಾಲಯದ ಬಾಗಿಲು ತೆರೆದಿರಲಿದ್ದು, ಬೆಳಿಗ್ಗೆ 6ರಿಂದ ಮಧ್ಯಾಹ್ನ 1ಗಂಟೆಯವರೆಗೆ ಹಾಗೂ ಮಧ್ಯಾಹ್ನ 3ರಿಂದ ರಾತ್ರಿ 8 ಗಂಟೆವರೆಗೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ದೇವಾಲಯಕ್ಕೆ ಬರುವ ಭಕ್ತರು ಆಧಾರ್ ಕಾರ್ಡ್, ಕೋವಿಡ್ ಲಸಿಕೆ ಪಡೆದ ಬಗ್ಗೆ ಪ್ರಮಾಣಪತ್ರವನ್ನು ತೆಗೆದುಕೊಂಡು ಬರುವುದು ಕಡ್ಡಾಯವಾಗಿದೆ.

https://www.youtube.com/watch?v=SAuOY9m88Lc&feature=share

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...