ಹುಬ್ಬಳ್ಳಿ; ಬಿಟ್ ಕಾಯಿನ್ ಹಾಗೂ ಡ್ರಗ್ಸ್ ವಿಚಾರಗಳು ರಾಜ್ಯದಲ್ಲಿ ಮತ್ತೆ ಚರ್ಚೆಗೆ ಬಂದಿದ್ದು, ಬಿಟ್ ಕಾಯಿನ್ ಕೇಸ್ ನಲ್ಲಿ ಪ್ರಭಾವಿಗಳೇ ಭಾಗಿಯಾಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿರುವ ಸಿಎಂ ಬೊಮ್ಮಾಯಿ ತನಿಖೆ ನಡೆಯುತ್ತಿದೆ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯ ಸರ್ಕಾರ ಬಿಟ್ ಕಾಯಿನ್ ಹಾಗೂ ಡ್ರಗ್ಸ್ ಕೇಸ್ ವಿಚಾರವನ್ನು ಸಮಗ್ರವಾಗಿ ತನಿಖೆ ನಡೆಸಿದೆ. ತನಿಖೆ ಬಳಿಕ ನಾವೇ ಇಡಿ ಹಾಗೂ ಸಿಬಿಐಗೆ ಪ್ರಕರಣ ವಹಿಸಿದ್ದೇವೆ. ಕೇಸ್ ನಲ್ಲಿ ಭಾಗಿಯಾಗಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಬಾಲಕಿ ಅಪಹರಣ ಪ್ರಕರಣ ಸುಖಾಂತ್ಯ; ಸೇಫ್ ಆಗಿ ಮನೆಗೆ ಬಿಟ್ಟು ಪರಾರಿಯಾದ ಕಿಡ್ನಾಪರ್ಸ್
ಇನ್ನು ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದ ಗೃಹ ಸಚಿವ ಅರಗ ಜ್ಞಾನೇಂದ್ರ, ಬಿಟ್ ಕಾಯಿನ್, ಡ್ರಗ್ಸ್ ವಿಚಾರವಾಗಿ ವಿಶೇಷ ತನಿಖೆ ನಡೆಯುತ್ತಿದೆ. ಹೀಗಿರುವಾಗ ಉಪಚುನಾವಣೆ ಉದ್ದೇಶಕ್ಕೆ ವಿಪಕ್ಷ ನಾಯಕರು ಜನರನ್ನು ಮಸಕು ಮಾಡುವ ಕೆಲಸ ಮಾಡಬಾರದು. ಸಿದ್ದರಾಮಯ್ಯ ಕೂಡ ಓರ್ವ ಸಿಎಂ ಆಗಿದ್ದವರು. ಇಂತಹ ಹೇಳಿಕೆಗಳು, ಟ್ವೀಟ್ ಗಳು ಸರಿಯಲ್ಲ ಎಂದಿದ್ದಾರೆ.
Shocking: ಯುಟ್ಯೂಬ್ ವಿಡಿಯೋ ನೋಡಿ ಹೆರಿಗೆ ಮಾಡಿಕೊಂಡ ಹುಡುಗಿ..!
ಬಿಟ್ ಕಾಯಿನ್ ಕೇಸ್ ನಲ್ಲಿ ಬಿಜೆಪಿಯ ಇಬ್ಬರು ಪ್ರಭಾವಿಗಳು ಶಾಮೀಲಾಗಿದ್ದಾರೆ. ಹಾಗಾಗಿ ಸರ್ಕಾರದಿಂದಲೇ ಅವರನ್ನು ರಕ್ಷಣೆ ಮಾಡುವ ಕೆಲಸ ನಡೆಯುತ್ತಿದೆ ಎಂಬ ಬಗ್ಗೆ ನಮಗೆ ಮಾಹಿತಿ ಬಂದಿದೆ. ಯಾರೇ ತಪ್ಪು ಮಾಡಿದರೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದರು.