ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 14,348 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸಾವಿನ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ 805 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 457191 ಕ್ಕೆ ಏರಿಕೆಯಾಗಿದೆ.
ʼವರ್ಕ್ ಫ್ರಮ್ ಹೋಂʼ ವೇಳೆ ನಡೆದ ತಮಾಷೆ ಸಂಗತಿಯನ್ನು ಹಂಚಿಕೊಂಡ ಗೂಗಲ್ ಸಿಇಒ
ಇನ್ನು ದೇಶದಲ್ಲಿ 161334 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 13198 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33627632 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ದೇಶದಲ್ಲಿ 12,84,552 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 74,33,392 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,04,82,00,966 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.