ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಚಿತ್ರಪ್ರದರ್ಶನ ರದ್ದು ಮಾಡಲಾಗಿದೆ.
ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ವಿಧಿವಶರಾಗಿದ್ದು, ಶೋಕಾರಣೆ ನಿಮಿತ್ತ ರಾಜ್ಯಾದ್ಯಂತ ಚಿತ್ರಪರ್ದರ್ಶನ ರದ್ದುಗೊಳಿಸಲಾಗಿದೆ ಎಂದು ಕರ್ನಾಟಕ ಚಲನಚಿತ್ರ ಪ್ರದರ್ಶಕರ ಮಹಾಮಂಡಲ್ ಉಪಾಧ್ಯಕ್ಷ ರಾಜಾರಾಮ್ ತಿಳಿಸಿದ್ದಾರೆ.
ಇದೇ ವೇಳೆ ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಬಾರ್ ಗಳನ್ನು ಬಂದ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.
ಹಬ್ಬದ ಹೊತ್ತಲ್ಲೇ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್
ನಟ ಪುನೀತ್ ರಾಜ್ ಕುಮಾರ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಉದ್ವೇಗಕ್ಕೊಳಗಾಗಬಹುದಾದ ಅಭಿಮಾನಿಗಳು ಕುಡಿದು ಇನ್ನಷ್ಟು ಭಾವೋದ್ವೇಗಕ್ಕೊಳಗಾಗಿ ಅಶಾಂತಿಗೆ ಕಾರಣವಾಗುವ ಸಾಧ್ಯತೆ ಇರುವುದರಿಂದ ಮುಂಜಾಗೃತಾ ಕ್ರಮವಾಗಿ ನಗರದಲ್ಲಿ ಭಾನುವಾರದ ಸಂಜೆಯವರೆಗೂ ಬಾರ್ ಗಳನ್ನು ಮುಚ್ಚಲಾಗುವುದು ಎಂದರು.
ಅಭಿಮಾನಿಗಳು ಹಾಗೂ ಸಾರ್ವಜನಿಕರು ಕಂಠೀರವ ಸ್ಟೇಡಿಯಂಗೆ ಬಂದು ಪುನೀತ್ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗುವುದು. ಅಭಿಮಾನಿಗಳು ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದರು.